ಸಂಗೀತ ನಿರ್ದೇಶಕ ದೇವಾ ನಿಧನ: ಮನೆಗೆ ತೆರಳಿ ಅಂತಿಮ ದರ್ಶನ ಪಡೆದ ನಟ ಪ್ರಭು
ದೇವಾ ಅವರ ಚೆನ್ನೈನ ನಿವಾಸಕ್ಕೆ ಚಿತ್ರರಂಗದ ಗಣ್ಯರು ಭೇಟಿ ನೀಡಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ದಕ್ಷಿಣ ಭಾರತದ ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವಾ ಅವರ ನಿಧನಕ್ಕೆ ತಮಿಳು ಚಿತ್ರರಂಗ ಕಂಬನಿ ಮಿಡಿದಿದೆ. 75 ವರ್ಷದ ದೇವಾ ಅವರು ಅಕ್ಟೋಬರ್ 17ರಂದು ನಿಧನರಾಗಿದ್ದು, ಅವರ ನಿಧನದ ಸುದ್ದಿ ಚಿತ್ರರಂಗದ ಗಣ್ಯರು ಹಾಗೂ ಸಂಗೀತ ಪ್ರೇಮಿಗಳಿಗೆ ಆಘಾತ ಉಂಟುಮಾಡಿದೆ. ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಸಂಗೀತ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಅವರು, ತಮಿಳು ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ 400ಕ್ಕೂ ಹೆಚ್ಚು ಚಿತ್ರಗಳಿಗೆ ಸಂಗೀತ ಸಂಯೋಜಿಸಿದ್ದರು.
ದೇವಾ ಅವರ ಚೆನ್ನೈನ ನಿವಾಸಕ್ಕೆ ಚಿತ್ರರಂಗದ ಗಣ್ಯರು ಭೇಟಿ ನೀಡಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಹಿರಿಯ ನಟ ಪ್ರಭು ಗಣೇಶನ್ ಅವರು ಕೂಡ ದೇವಾ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿರುವ ದೃಶ್ಯಗಳನ್ನು ಈ ವಿಡಿಯೊದಲ್ಲಿ ನೋಡಬಹುದು. ರಜನಿಕಾಂತ್ ಸೇರಿದಂತೆ ಹಲವು ಗಣ್ಯರು ದೇವಾ ಅವರಿಗೆ ಗೌರವ ಸಲ್ಲಿಸಿದ್ದು, ಅವರ ಸಂಗೀತ ಸಾಧನೆ ಮತ್ತು ಜನಪ್ರಿಯ ಗಾನಾ ಹಾಡುಗಳು ಅಭಿಮಾನಿಗಳ ನೆನಪಿನಲ್ಲಿ ಉಳಿಯಲಿವೆ.
Next Story

