ಅಗರ್ತಲಾದಲ್ಲಿ ಧಾರಾಕಾರ ಮಳೆ, ಪ್ರವಾಹ ಭೀತಿ
ಅಗರ್ತಲಾದಲ್ಲಿ ನಿರಂತರ ಭಾರೀ ಮಳೆಯಿಂದ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಎನ್‌ಡಿಆರ್‌ಎಫ್ ಹಾಗೂ ಆಡಳಿತ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.
ತ್ರಿಪುರಾ ರಾಜಧಾನಿ ಅಗರ್ತಲಾದಲ್ಲಿ ಸುರಿದ ಭಾರೀ ಮಳೆಯಿಂದ ನಗರದ ಹಲವು ಭಾಗಗಳಲ್ಲಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನಿರಂತರ ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಹಲವು ರಸ್ತೆಗಳು ಜಲಾವೃತಗೊಂಡಿರುವ ಕಾರಣ ಸಂಚಾರಕ್ಕೂ ತೊಂದರೆಯಾಗಿದೆ. ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ಸ್ಥಳೀಯ ಆಡಳಿತ ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆಗೆ ಮುಂದಾಗಿದೆ. ನೀರಿನಲ್ಲಿ ಸಿಲುಕಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ. ಪ್ರವಾಹ ಪೀಡಿತರಿಗೆ ಅಗತ್ಯ ನೆರವು ನೀಡಲು ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.
Next Story

