
ದೆಹಲಿಯಲ್ಲಿ ಇಮಿಗ್ರೇಷನ್ ಪೂರ್ಣಗೊಳಿಸದೆ ಮೂವರು ಮ್ಯೂನಿಚ್‌ಗೆ ತೆರಳಿದ ಪ್ರಕರಣಕ್ಕೆ ಏರ್ ಇಂಡಿಯಾಗೆ ಕೇಂದ್ರ ಶೋಕಾಸ್ ನೋಟಿಸ್ ನೀಡಿದೆ.
ಲಂಡನ್ ತೆರಳುತ್ತಿದ್ದ ಏರ್‌ಇಂಡಿಯಾ ವಿಮಾನ ಸ್ವಿಡ್ಜರ್ಲ್ಯಾಂಡ್‌ನಲ್ಲಿ ಲ್ಯಾಂಡಿಂಗ್- 290ಕ್ಕೂ ಹೆಚ್ಚು ಪ್ರಯಾಣಿಕರು ಅತಂತ್ರ
ಏರ್ ಟ್ರಾಫಿಕ್ ಕಂಟ್ರೋಲ್ ಸಿಸ್ಟಮ್‌ನಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷದಿಂದಾಗಿ ಯುಕೆಯಲ್ಲಿ ವಿಮಾನ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ತಾಂತ್ರಿಕ ದೋಷ ಕಾಣಿಸಿಕೊಂಡ ಬೆನ್ನಲ್ಲೇ ಬ್ರಿಟನ್‌ನ ಹಲವು ವಿಮಾನ ನಿಲ್ದಾಣಗಳಲ್ಲಿ ವಿಮಾನಗಳ ಹಾರಾಟ ಮತ್ತು ಲ್ಯಾಂಡಿಂಗ್ ಮೇಲೆ ಪರಿಣಾಮ ಬೀರಿದೆ.
ಮುಂಬೈನಿಂದ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾದ AI 131 ವಿಮಾನವು ಲಂಡನ್ ಹೀಥ್ರೋ ವಿಮಾನ ನಿಲ್ದಾಣದಲ್ಲಿನ ವಾಯು ಸಂಚಾರ ನಿಯಂತ್ರಣ (ATC) ವ್ಯವಸ್ಥೆಯಲ್ಲಿನ ತಾಂತ್ರಿಕ ಸಮಸ್ಯೆಯಿಂದಾಗಿ ಮಾರ್ಗ ಬದಲಿಸಿ ಸ್ವಿಟ್ಜರ್‌ಲ್ಯಾಂಡ್‌ನ ಜ್ಯೂರಿಚ್ ವಿಮಾನ ನಿಲ್ದಾಣದಲ್ಲಿ ಇಳಿದಿದೆ. ವಿಮಾನದಲ್ಲಿ 290ಕ್ಕೂ ಹೆಚ್ಚು ಪ್ರಯಾಣಿಕರಿದ್ದರು.
ಹೀಥ್ರೋ ವಿಮಾನ ನಿಲ್ದಾಣದಲ್ಲಿನ ಸಮಸ್ಯೆ ಶೀಘ್ರದಲ್ಲೇ ಬಗೆಹರಿಯುವ ನಿರೀಕ್ಷೆಯಿದ್ದ ಹಿನ್ನೆಲೆಯಲ್ಲಿ ಜ್ಯೂರಿಚ್‌ನಲ್ಲಿ ಇಳಿದ ಬಳಿಕ ಪ್ರಯಾಣಿಕರಿಗೆ ಕೆಲಕಾಲ ವಿಮಾನದೊಳಗೇ ಕಾಯುವಂತೆ ಸೂಚಿಸಲಾಗಿತ್ತು. ಆದರೆ ಬಳಿಕ ವಿಮಾನವನ್ನು ರದ್ದುಗೊಳಿಸಲಾಗಿದ್ದು, ಎಲ್ಲ ಪ್ರಯಾಣಿಕರು ಜ್ಯೂರಿಚ್ ವಿಮಾನ ನಿಲ್ದಾಣದಲ್ಲಿ ವಿಮಾನದಿಂದ ಕೆಳಗಿಳಿದಿದ್ದಾರೆ.
ಬ್ರಿಟನ್‌ನ ಹಲವು ವಿಮಾನ ನಿಲ್ದಾಣಗಳಲ್ಲಿ ಅಸ್ತವ್ಯಸ್ತ
ಬ್ರಿಟನ್‌ನ ನ್ಯಾಷನಲ್ ಏರ್ ಟ್ರಾಫಿಕ್ ಸರ್ವಿಸಸ್ ವ್ಯವಸ್ಥೆಯಲ್ಲಿನ ತಾಂತ್ರಿಕ ದೋಷದಿಂದ ಹೀಥ್ರೋ ಸೇರಿದಂತೆ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ವಿಮಾನಗಳ ಕಾರ್ಯಾಚರಣೆ ಮೇಲೆ ತೀವ್ರ ಪರಿಣಾಮ ಬೀರಿದೆ. ಫ್ಲೈಟ್‌ರಾಡಾರ್ ಪ್ರಕಾರ, ಬ್ರಿಟನ್‌ನಾದ್ಯಂತ 1,000ಕ್ಕೂ ಹೆಚ್ಚು ವಿಮಾನಗಳು ರದ್ದಾಗಿವೆ.
ಹೀಥ್ರೋ ವಿಮಾನ ನಿಲ್ದಾಣವು ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ದಿನದ ಉಳಿದ ಅವಧಿಗೆ ಆಗಮನದ ವಿಮಾನಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿರುವುದಾಗಿ ತಿಳಿಸಿದೆ. ನಿರ್ಗಮನ ವಿಮಾನಗಳ ಕಾರ್ಯಾಚರಣೆ ಪುನರಾರಂಭವಾಗಿದ್ದರೂ, ವ್ಯತ್ಯಯ ಮುಂದುವರಿಯುವ ಸಾಧ್ಯತೆಯಿದ್ದು, ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ತೆರಳುವ ಮೊದಲು ತಮ್ಮ ವಿಮಾನಯಾನ ಸಂಸ್ಥೆಯಿಂದ ಇತ್ತೀಚಿನ ಮಾಹಿತಿ ಪರಿಶೀಲಿಸುವಂತೆ ಸೂಚಿಸಲಾಗಿದೆ.
ಸಮಸ್ಯೆ ಪರಿಹಾರ, ವಿಮಾನಗಳ ಬ್ಯಾಕ್‌ಲಾಗ್ ತೆರವು ಕಾರ್ಯ
ವಾಯು ಸಂಚಾರ ನಿಯಂತ್ರಣ ಸೇವೆ ಒದಗಿಸುವ NATS, ತನ್ನ ವ್ಯವಸ್ಥೆಯಲ್ಲಿನ ತಾಂತ್ರಿಕ ಸಮಸ್ಯೆ ಪರಿಹಾರಗೊಂಡಿದ್ದು, ಕಾರ್ಯಾಚರಣೆಗಳು ಸಹಜ ಸ್ಥಿತಿಗೆ ಮರಳಿವೆ ಎಂದು ತಿಳಿಸಿದೆ. ಆದರೆ ಸಮಸ್ಯೆಯಿಂದ ಉಂಟಾದ ವಿಮಾನಗಳ ಬಾಕಿಯನ್ನು ತೆರವುಗೊಳಿಸಲು ಮತ್ತು ವಿಮಾನ ನಿಲ್ದಾಣಗಳು ಹಾಗೂ ವಿಮಾನಯಾನ ಸಂಸ್ಥೆಗಳ ಕಾರ್ಯಾಚರಣೆಯನ್ನು ಸಹಜ ಸ್ಥಿತಿಗೆ ತರಲು ಇನ್ನಷ್ಟು ಸಮಯ ಬೇಕಾಗಬಹುದು ಎಂದು ಹೇಳಿದೆ.

