
ಮದುವೆಗಳಲ್ಲಿ ಚಿನ್ನದ ಖರೀದಿ ಕಡಿಮೆ ಮಾಡುವಂತೆ ದೇಶದ ಜನತೆಗೆ ಪ್ರಧಾನಿ ಮೋದಿ ಕಠಿಣ ಕರೆ ನೀಡಿದ್ದಾರೆ.
ಪಂಚ ರಾಜ್ಯ ಫಲಿತಾಂಶ: ಇಂದು ಸಂಜೆ 6.30ಕ್ಕೆ ಬಿಜೆಪಿ ಕಚೇರಿಯಲ್ಲಿ ಮೋದಿ ಭಾಷಣ
ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ. ಸಂಜೆ 6.30ಕ್ಕೆ ಪ್ರಧಾನಿ ಮೋದಿ ಅವರು ಬಿಜೆಪಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ದೆಹಲಿಯ ಭಾರತೀಯ ಜನತಾ ಪಕ್ಷದ ಪ್ರಧಾನ ಕಚೇರಿಯಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿದೆ. ಚುನಾವಣಾ ಟ್ರೆಂಡ್‌ಗಳಲ್ಲಿ ಪಕ್ಷವು ಭರ್ಜರಿ ಮುನ್ನಡೆ ಸಾಧಿಸಿರುವ ಹಿನ್ನೆಲೆ ಇಂದು ಸಂಜೆ 6.30 ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಕಚೇರಿಗೆ ಭೇಟಿ ನೀಡುವ ಸಾಧ್ಯತೆಯಿದೆ. ಈ ವೇಳೆ ಚುನಾವಣಾ ಯಶಸ್ಸಿನ ಕುರಿತು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ವಿಜಯೋತ್ಸವದ ಭಾಷಣ ಮಾಡಲಿದ್ದಾರೆ.
ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿದೆ. ಒಟ್ಟು 294 ವಿಧಾನಸಭಾ ಸ್ಥಾನಗಳ ಪೈಕಿ ಬಹುಮತಕ್ಕೆ 148 ಸ್ಥಾನಗಳ ಅವಶ್ಯಕತೆಯಿದೆ. ಸದ್ಯದ ಟ್ರೆಂಡ್ ಪ್ರಕಾರ ಬಿಜೆಪಿ 182 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಅಧಿಕಾರ ಹಿಡಿಯುವತ್ತ ದಾಪುಗಾಲು ಹಾಕುತ್ತಿದೆ. ಆಡಳಿತಾರೂಢ ಟಿಎಂಸಿ 111 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಅಸ್ಸಾಂನಲ್ಲಿ ಬಿಜೆಪಿ ಮುನ್ನಡೆ
ಇಲ್ಲಿನ 126 ಸ್ಥಾನಗಳ ಪೈಕಿ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ 98 ಕ್ಷೇತ್ರಗಳಲ್ಲಿ ಭಾರಿ ಮುನ್ನಡೆ ಸಾಧಿಸಿದೆ. ಇದರಲ್ಲಿ ಬಿಜೆಪಿ ಏಕಾಂಗಿಯಾಗಿ 78 ಸ್ಥಾನಗಳಲ್ಲಿ ಮುಂದಿದ್ದರೆ, ಮಿತ್ರಪಕ್ಷಗಳಾದ ಎಜಿಪಿ ಮತ್ತು ಬಿಪಿಎಫ್ ತಲಾ 10 ಸ್ಥಾನಗಳಲ್ಲಿ ಜಯದ ಹಾದಿಯಲ್ಲಿವೆ. ಕಾಂಗ್ರೆಸ್ ಕೇವಲ 25 ಸ್ಥಾನಗಳಿಗೆ ಸೀಮಿತವಾಗಿದೆ.
ವಿಜಯೋತ್ಸವದ ಸಿದ್ಧತೆ
ಪಕ್ಷದ ಭರ್ಜರಿ ಮುನ್ನಡೆಯನ್ನು ಆಚರಿಸಲು ಬಿಜೆಪಿ ಪ್ರಧಾನ ಕಚೇರಿಯಲ್ಲಿ ವ್ಯಾಪಕ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಕಾರ್ಯಕರ್ತರು ಮತ್ತು ಬೆಂಬಲಿಗರಿಗಾಗಿ ಸಾಂಪ್ರದಾಯಿಕ ಶೈಲಿಯ ಭೋಜನ ವ್ಯವಸ್ಥೆ ಮಾಡಲಾಗುತ್ತಿದೆ. ಸುಮಾರು 500 ಜನರಿಗೆ ಆಗುವಷ್ಟು ಆಲೂ ಪೂರಿ, ಸ್ಯಾಂಡ್‌ವಿಚ್, ಪೋಹಾ ಮತ್ತು ಜಿಲೇಬಿಗಳನ್ನು ಸಿದ್ಧಪಡಿಸಲಾಗುತ್ತಿದೆ.
ಬಂಗಾಳದ ಯಶಸ್ಸಿನ ಸಂಕೇತವಾಗಿ ವಿಶೇಷವಾಗಿ ರಸಗುಲ್ಲಾ, ಮಿಶ್ತಿ ದೋಯಿ, ಲಸ್ಸಿ ಮತ್ತು ರಬ್ರಿಯಂತಹ ಸಿಹಿತಿಂಡಿಗಳನ್ನು ಮೆನುವಿನಲ್ಲಿ ಸೇರಿಸಲಾಗಿದೆ. ಬಾಣಸಿಗರ ತಂಡವು ಈಗಾಗಲೇ ಈ ಎಲ್ಲ ಭಕ್ಷ್ಯಗಳ ತಯಾರಿಯಲ್ಲಿ ತೊಡಗಿದ್ದು, ಸಂಜೆಯ ಸಂಭ್ರಮಾಚರಣೆಗೆ ಕಚೇರಿ ಸಜ್ಜಾಗಿದೆ.

