ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿದೆ.. ದಯವಿಟ್ಟು ರಕ್ಷಿಸಿ;  ಕೆಲವೇ ಕ್ಷಣಗಳಲ್ಲಿ ತಾಯಿ-ಮಕ್ಕಳು ಸಜೀವ ದಹನ
x

ದೆಹಲಿ ಅಗ್ನಿ ದುರಂತದಲ್ಲಿ ತಾಯಿ ಮತ್ತು ಇಬ್ಬರು ಪುತ್ರಿಯರು ಸಜೀವ ದಹನ

ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿದೆ.. ದಯವಿಟ್ಟು ರಕ್ಷಿಸಿ; ಕೆಲವೇ ಕ್ಷಣಗಳಲ್ಲಿ ತಾಯಿ-ಮಕ್ಕಳು ಸಜೀವ ದಹನ

ದೆಹಲಿ ಲೋಧಿ ಕಾಲೋನಿಯ ಮನೆಯಲ್ಲಿ ಭೀಕರ ಬೆಂಕಿ ಅವಘಡ. ನಾವು ಮನೆಯೊಳಗೆ ಸಿಲುಕಿದ್ದೇವೆ, ಬೇಗ ಸಹಾಯ ಮಾಡಿ ಎಂದು ಕರೆ ಮಾಡಿದ ಕೆಲವೇ ಕ್ಷಣಗಳಲ್ಲಿ ತಾಯಿ ಮತ್ತು ಇಬ್ಬರು ಪುತ್ರಿಯರು ಸಜೀವ ದಹನಗೊಂಡರು.


Click the Play button to hear this message in audio format

ದೆಹಲಿಯ ಲೋಧಿ ಕಾಲೋನಿಯ ಬಿಕೆ ದತ್ ಕಾಲೋನಿಯಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 45 ವರ್ಷದ ಮಹಿಳೆ ಹಾಗೂ ಆಕೆಯ ಇಬ್ಬರು ಪುತ್ರಿಯರು ಸಜೀವ ದಹನಗೊಂಡಿರುವ ದಾರುಣ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.

ಬೆಳಗ್ಗೆ 10.21ರ ಸುಮಾರಿಗೆ ದೆಹಲಿ ಅಗ್ನಿಶಾಮಕ ದಳಕ್ಕೆ ಮಹಿಳೆಯೊಬ್ಬರು ಕರೆ ಮಾಡಿ, "ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ... ನಾವು ಒಳಗೆ ಸಿಲುಕಿದ್ದೇವೆ... ದಯವಿಟ್ಟು ಬೇಗ ಸಹಾಯ ಕಳುಹಿಸಿ" ಎಂದು ಆತಂಕದಿಂದ ಮನವಿ ಮಾಡಿದ್ದಾರೆ. ಕೆಲವೇ ಕ್ಷಣಗಳಲ್ಲಿ ಕರೆ ಸಂಪರ್ಕ ಕಡಿತಗೊಂಡಿದೆ.

ತಕ್ಷಣವೇ ಪೊಲೀಸರು, ಅಗ್ನಿಶಾಮಕ ದಳದ ಎರಡು ವಾಹನಗಳು ಹಾಗೂ ಮೂರು ಆಂಬುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿವೆ. ಆದರೆ ರಕ್ಷಣಾ ಕಾರ್ಯ ಆರಂಭವಾಗುವಷ್ಟರಲ್ಲಿ ಮನೆಯ ಮೇಲಂತಸ್ತು ಸಂಪೂರ್ಣ ಬೆಂಕಿಗೆ ಆಹುತಿಯಾಗಿತ್ತು. ದಟ್ಟ ಹೊಗೆ ಆವರಿಸಿದ್ದರಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಗ್ನಿಶಾಮಕ ಸಿಬ್ಬಂದಿ ಮನೆಯ ಬಾಗಿಲಿನ ಬಾಗಿಲು ಒಡೆದು ಒಳಗೆ ಪ್ರವೇಶಿಸಿದಾಗ, ಮಹಿಳೆ ಹಾಗೂ 7 ಮತ್ತು 13 ವರ್ಷದ ಇಬ್ಬರು ಪುತ್ರಿಯರ ಸುಟ್ಟ ಮೃತದೇಹಗಳು ಪತ್ತೆಯಾಗಿವೆ. ಪ್ರಾಥಮಿಕ ತನಿಖೆಯ ಪ್ರಕಾರ ಬೆಂಕಿ ಅತ್ಯಂತ ವೇಗವಾಗಿ ಮನೆಯೆಲ್ಲೆಡೆ ವ್ಯಾಪಿಸಿದ್ದರಿಂದ ಮೂವರಿಗೆ ಹೊರಬರುವ ಅವಕಾಶವೇ ಸಿಗಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದು, ಪೊಲೀಸರು ಹಾಗೂ ವಿಧಿವಿಜ್ಞಾನ ತಜ್ಞರ ತಂಡ ಸ್ಥಳ ಪರಿಶೀಲನೆ ನಡೆಸುತ್ತಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಾಥಮಿಕ ಶಂಕೆಯಂತೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದೆಂದು ಪೊಲೀಸರು ಶಂಕಿಸಿದ್ದು, ಈ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Read More
Next Story