Domestic cylinder prices hiked again; consumers worried
x

ಸಾಂದರ್ಭಿಕ ಚಿತ್ರ

ಗೃಹ ಬಳಕೆಯ ಸಿಲಿಂಡರ್ ದರ ಮತ್ತೆ ಏರಿಕೆ ; ಕಂಗಾಲಾದ ಗ್ರಾಹಕರು

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ನಿರಂತರ ಸಂಘರ್ಷದಿಂದಾಗಿ ಜಾಗತಿಕ ತೈಲ ಮತ್ತು ಅನಿಲ ಪೂರೈಕೆಯ ಮೇಲೆ ಭಾರಿ ಒತ್ತಡ ಉಂಟಾಗಿದೆ. ಇದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನ ಬೆಲೆಗಳು ಗಗನಕ್ಕೇರಲು ಪ್ರಮುಖ ಕಾರಣವಾಗಿದೆ.


Click the Play button to hear this message in audio format

ಪೆಟ್ರೋಲ್, ಡೀಸೆಲ್ ಮತ್ತು ಸಿಎನ್​ಜಿ ಬೆಲೆ ಏರಿಕೆಯ ಬೆನ್ನಲ್ಲೇ ಜನ ಸಾಮಾನ್ಯರಿಗೆ ಕೇಂದ್ರ ಸರ್ಕಾರ ಮತ್ತೊಂದು ಶಾಕ್ ನೀಡಿದೆ.

ಗೃಹಬಳಕೆಯ ಎಲ್‌ಪಿಜಿ (LPG) ಸಿಲಿಂಡರ್ ಬೆಲೆಯಲ್ಲಿ ಪ್ರತಿ ಸಿಲಿಂಡರ್‌ಗೆ 29 ರೂ. ಹೆಚ್ಚಳ ಮಾಡಲಾಗಿದೆ. ಕಳೆದ ಮೂರು ತಿಂಗಳಲ್ಲಿ ಎರಡನೇ ಬಾರಿ ದರ ಏರಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯೊಂದಿಗೆ, ದೆಹಲಿಯಲ್ಲಿ 14.2 ಕೆಜಿ ತೂಕದ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 913 ರೂಪಾಯಿಯಿಂದ 942 ರೂಪಾಯಿಗೆ ಏರಿಕೆಯಾಗಿದೆ. ಪರಿಷ್ಕೃತ ದರಗಳು ಜೂನ್ 7 ರಿಂದಲೇ ಜಾರಿಗೆ ಬಂದಿವೆ.

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ನಿರಂತರ ಸಂಘರ್ಷದಿಂದಾಗಿ ಜಾಗತಿಕ ತೈಲ ಮತ್ತು ಅನಿಲ ಪೂರೈಕೆಯ ಮೇಲೆ ಭಾರಿ ಒತ್ತಡ ಉಂಟಾಗಿದೆ. ಇದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನ ಬೆಲೆಗಳು ಗಗನಕ್ಕೇರಲು ಪ್ರಮುಖ ಕಾರಣವಾಗಿದೆ.

ಇದಕ್ಕೂ ಮುನ್ನ, ಮಾರ್ಚ್ 7 ರಂದು ಪ್ರತಿ ಸಿಲಿಂಡರ್ ಬೆಲೆಯನ್ನು 60 ರೂ. ಹೆಚ್ಚಿಸಲಾಗಿತ್ತು. ಪ್ರಸ್ತುತ ಮಾಡಲಾದ ದರ ಏರಿಕೆಯು ತೈಲ ಕಂಪನಿಗಳಿಗೆ ದೇಶೀಯ ಎಲ್‌ಪಿಜಿ ಮಾರಾಟದಲ್ಲಿ ಆಗುತ್ತಿರುವ ನಷ್ಟವನ್ನು ಭಾಗಶಃ ಸರಿದೂಗಿಸಿದೆ ಎಂದು ಮೂಲಗಳು ತಿಳಿಸಿವೆ.

ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ, ದೇಶೀಯ ಉತ್ಪಾದನೆಯನ್ನು ಹೆಚ್ಚಿಸುವುದು ಮತ್ತು ಆಮದನ್ನು ಖಚಿತಪಡಿಸಿಕೊಳ್ಳುವುದು ಸೇರಿದಂತೆ ಎಲ್‌ಪಿಜಿ ಲಭ್ಯತೆಯನ್ನು ಸಮರ್ಪಕವಾಗಿ ಕಾಯ್ದುಕೊಳ್ಳಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದರು.

Read More
Next Story