ಅಸ್ಸಾಂನಲ್ಲಿ ಕರ್ತವ್ಯದಲ್ಲಿದ್ದ ಹಾಸನದ ಬಿಎಸ್‌ಎಫ್ ಯೋಧ ಹುತಾತ್ಮ
x

ಮಧು ಅವರ ಸೇವಾವಧಿ ಪೂರ್ಣಗೊಂಡು ನಿವೃತ್ತಿಯಾಗಲು ಇನ್ನು ಕೇವಲ ಮೂರು ತಿಂಗಳು ಬಾಕಿ ಇತ್ತು.

ಅಸ್ಸಾಂನಲ್ಲಿ ಕರ್ತವ್ಯದಲ್ಲಿದ್ದ ಹಾಸನದ ಬಿಎಸ್‌ಎಫ್ ಯೋಧ ಹುತಾತ್ಮ

ಮಧು ಅವರ ಸೇವಾವಧಿ ಪೂರ್ಣಗೊಂಡು ನಿವೃತ್ತಿಯಾಗಲು ಕೇವಲ ಮೂರು ತಿಂಗಳು ಬಾಕಿ ಇತ್ತು. ಕುಟುಂಬದವರೊಂದಿಗೆ ಫೋನ್‌ನಲ್ಲಿ ಮಾತನಾಡಿದ ಕೆಲವೇ ಸಮಯದ ಬಳಿಕ ಅವರು ಅನಾರೋಗ್ಯಕ್ಕೀಡಾಗಿ ಮೃತಪಟ್ಟಿರುವುದು ಕುಟುಂಬಸ್ಥರಿಗೆ ಆಘಾತ ಉಂಟುಮಾಡಿದೆ.

Click the Play button to hear this message in audio format

ಅಸ್ಸಾಂನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಾಸನ ಜಿಲ್ಲೆಯ ಬಿಎಸ್‌ಎಫ್ ಯೋಧರೊಬ್ಬರು ದಿಢೀರ್ ಅನಾರೋಗ್ಯಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. ಮೃತರನ್ನು ಆಲೂರು ತಾಲೂಕಿನ ಹಾಂಜಿಹಳ್ಳಿ ಗ್ರಾಮದ ಮಧು ಹೆಚ್.ಹೆಚ್. (34) ಎಂದು ಗುರುತಿಸಲಾಗಿದೆ.

ಮಧು ಅವರು ಕಳೆದ 15 ವರ್ಷಗಳಿಂದ ಗಡಿ ಭದ್ರತಾ ಪಡೆ (ಬಿಎಸ್‌ಎಫ್)ಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸದ್ಯ ಅಸ್ಸಾಂನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು, ಕ್ಯಾಂಪ್‌ನಲ್ಲಿದ್ದ ವೇಳೆ ಹಠಾತ್ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ತಕ್ಷಣ ಅಗತ್ಯ ಚಿಕಿತ್ಸೆ ನೀಡಲು ಪ್ರಯತ್ನಿಸಿದರೂ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ನಿವೃತ್ತಿಗೆ ಇನ್ನು ಮೂರು ತಿಂಗಳು

ಮಧು ಅವರ ಸೇವಾವಧಿ ಪೂರ್ಣಗೊಂಡು ನಿವೃತ್ತಿಯಾಗಲು ಕೇವಲ ಮೂರು ತಿಂಗಳು ಬಾಕಿ ಇತ್ತು. ಕುಟುಂಬದವರೊಂದಿಗೆ ಫೋನ್‌ನಲ್ಲಿ ಮಾತನಾಡಿದ ಕೆಲವೇ ಸಮಯದ ಬಳಿಕ ಅವರು ಅನಾರೋಗ್ಯಕ್ಕೀಡಾಗಿ ಮೃತಪಟ್ಟಿರುವುದು ಕುಟುಂಬಸ್ಥರಿಗೆ ಆಘಾತ ಉಂಟುಮಾಡಿದೆ.

ಒಂದೂವರೆ ತಿಂಗಳ ಹಿಂದಷ್ಟೇ ಮಗುವಿನ ತಂದೆಯಾಗಿದ್ದರು

ಮಧು ಅವರ ಪತ್ನಿಗೆ ಒಂದೂವರೆ ತಿಂಗಳ ಹಿಂದಷ್ಟೇ ಮಗು ಜನಿಸಿತ್ತು. ಹೀಗಾಗಿ ಕುಟುಂಬದಲ್ಲಿ ಸಂತಸದ ವಾತಾವರಣವಿದ್ದ ಸಂದರ್ಭದಲ್ಲಿ ಯೋಧನ ಅಕಾಲಿಕ ನಿಧನ ದುಃಖದ ಛಾಯೆ ಮೂಡಿಸಿದೆ. ಪತಿ-ತಂದೆಯನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಮೃತ ಯೋಧ ಮಧು ಅವರ ಪಾರ್ಥಿವ ಶರೀರವನ್ನು ಸ್ವಗ್ರಾಮಕ್ಕೆ ತರಲಾಗುತ್ತಿದ್ದು, ಹಾಂಜಿಹಳ್ಳಿ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ತಿಳಿದುಬಂದಿದೆ.

Read More
Next Story