ಪ್ರಹ್ಲಾದ್ ಜೋಶಿ ವಿರುದ್ಧ ರೈತರ ಪ್ರತಿಭಟನೆ
ಹುಬ್ಬಳ್ಳಿಯಲ್ಲಿ ವಿವಿಧ ಬೇಡಿಕೆಗಳಿಗಾಗಿ ರೈತರು ನಡೆಸುತ್ತಿದ್ದ ಪ್ರತಿಭಟನೆಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಭರವಸೆ ಬಳಿಕ ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ.
ಹುಬ್ಬಳ್ಳಿಯಲ್ಲಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರೈತರು ನಡೆಸುತ್ತಿದ್ದ ಪ್ರತಿಭಟನೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಭರವಸೆ ಬಳಿಕ ಅಂತ್ಯಗೊಂಡಿದೆ. ರೈತರ ಸಮಸ್ಯೆಗಳ ಕುರಿತು ಸಚಿವರು ಮಾತುಕತೆ ನಡೆಸಿ, ಬೇಡಿಕೆಗಳನ್ನು ಸಂಬಂಧಪಟ್ಟ ಮಟ್ಟದಲ್ಲಿ ಪರಿಶೀಲಿಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಬಳಿಕ ಪ್ರತಿಭಟನೆ ಹಿಂಪಡೆಯಲು ರೈತರು ನಿರ್ಧರಿಸಿದ್ದಾರೆ. ಪ್ರತಿಭಟನೆ ವೇಳೆ ರೈತರು ತಮ್ಮ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದಿದ್ದು, ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿದ್ದರು. ಇದೀಗ ಸಚಿವರ ಭರವಸೆಯ ಹಿನ್ನೆಲೆಯಲ್ಲಿ ರೈತರು ಪ್ರತಿಭಟನೆ ಅಂತ್ಯಗೊಳಿಸಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ.
Next Story

