x

ರಾಹುಲ್‌ ಬಂಧನ ಹುಬ್ಬಳ್ಳಿಯಲ್ಲಿ ಹೈಡ್ರಾಮಾ

ಹುಬ್ಬಳ್ಳಿಯ ವಿದ್ಯಾನಗರದಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಬಂಧನ ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆ ನಡೆಸಿದರು. ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.


Click the Play button to hear this message in audio format

ಹುಬ್ಬಳ್ಳಿಯ ವಿದ್ಯಾನಗರದಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಇತರೆ ಇಂಡಿಯಾ ಮೈತ್ರಿಕೂಟದ ಸಂಸದರನ್ನು ಬಂಧಿಸಿರುವುದನ್ನು ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿಯ ಆಕಾಶವಾಣಿ ಭವನದ ಬಳಿ ನಡೆದ ಪ್ರತಿಪಕ್ಷಗಳ ಪ್ರತಿಭಟನೆ ವೇಳೆ ಬಂಧನ ನಡೆದಿತ್ತು. ಇದನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಪ್ರತಿಭಟನೆ ವೇಳೆ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಹುಬ್ಬಳ್ಳಿಯ ವಿದ್ಯಾನಗರದಲ್ಲಿ ನಡೆದ ಪ್ರತಿಭಟನೆಯ ದೃಶ್ಯಗಳು ಇಲ್ಲಿವೆ.

Read More
Next Story