ಹೈದರಾಬಾದ್‌ನಲ್ಲಿ 100 ಪೊಲೀಸ್ ತಂಡಗಳ ಕಾರ್ಯಾಚರಣೆ | ನಂಬರ್ ಪ್ಲೇಟ್ ಇಲ್ಲದ ವಾಹನಗಳು ವಶ
ಹೈದರಾಬಾದ್‌ನಲ್ಲಿ ಆಪರೇಷನ್ ಕವಚ್ ಕಾರ್ಯಾಚರಣೆ ನಡೆಸಿದ ಪೊಲೀಸರು, 100 ತಂಡಗಳ ಮೂಲಕ ನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನು ವಶಕ್ಕೆ ಪಡೆದು ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
ತೆಲಂಗಾಣದ ಹೈದರಾಬಾದ್‌ನಲ್ಲಿ ನಗರ ಪೊಲೀಸರು ‘ಆಪರೇಷನ್ ಕವಚ್’ ಹೆಸರಿನಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ 100 ಪೊಲೀಸ್ ತಂಡಗಳು ಭಾಗವಹಿಸಿದ್ದು, ನಂಬರ್ ಪ್ಲೇಟ್ ಇಲ್ಲದೆ ಸಂಚರಿಸುತ್ತಿದ್ದ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ನಗರದಲ್ಲಿ ವಾಹನಗಳ ತಪಾಸಣೆ ನಡೆಸಿ, ಸಂಚಾರ ನಿಯಮಗಳ ಉಲ್ಲಂಘನೆ ಮತ್ತು ಗುರುತು ಪತ್ತೆಹಚ್ಚಲು ಅಡ್ಡಿಯಾಗುವಂತಹ ವಾಹನಗಳ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಹೈದರಾಬಾದ್ ನಗರ ಪೊಲೀಸ್ ಆಯುಕ್ತ ವಿ.ಸಿ. ಸಜ್ಜನರ್ ಅವರು ಕಾರ್ಯಾಚರಣೆಯ ಕುರಿತು ಮಾಹಿತಿ ನೀಡಿದ್ದಾರೆ. ಕಾರ್ಯಾಚರಣೆಯ ದೃಶ್ಯಗಳು ಮತ್ತು ಪೊಲೀಸ್ ಆಯುಕ್ತರ ಹೇಳಿಕೆಯ ಪ್ರಮುಖ ಭಾಗಗಳನ್ನು ಈ ವಿಡಿಯೊದಲ್ಲಿ ವೀಕ್ಷಿಸಿ.
Next Story

