
ನಮ್ಮ ಗ್ರಾಹಕರು, ಸಿಬ್ಬಂದಿ ಮತ್ತು ವಿಮಾನದ ಸುರಕ್ಷತೆಯೇ ಇಂಡಿಗೋಗೆ ಮೊದಲ ಆದ್ಯತೆ ಎಂದು ಸಂಸ್ಥೆ ತಿಳಿಸಿದೆ.
ಸಿಬ್ಬಂದಿ ಅಸ್ವಸ್ಥ: ದೋಹಾದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನ ಮಸ್ಕತ್‌ಗೆ ಡೈವರ್ಟ್
ಇಂಡಿಗೋ ವಿಮಾನಯಾನ ಸಂಸ್ಥೆಯ 6E 1302 ವಿಮಾನವು ಮಸ್ಕತ್ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದ್ದು, ಅಸ್ವಸ್ಥಗೊಂಡಿದ್ದ ಸಿಬ್ಬಂದಿಗೆ ವೈದ್ಯಕೀಯ ತಂಡ ಚಿಕಿತ್ಸೆ ನೀಡಿದೆ.
ದೋಹಾದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನವೊಂದರಲ್ಲಿ ಸಿಬ್ಬಂದಿಯೊಬ್ಬರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ತುರ್ತು ವೈದ್ಯಕೀಯ ನೆರವಿಗಾಗಿ ಗುರುವಾರ ಮಸ್ಕತ್‌ಗೆ ತಿರುಗಿಸಲಾಯಿತು. ಇಂಡಿಗೋ ವಿಮಾನಯಾನ ಸಂಸ್ಥೆಯ 6E 1302 ವಿಮಾನವು ಮಸ್ಕತ್ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದ್ದು, ಅಸ್ವಸ್ಥಗೊಂಡಿದ್ದ ಸಿಬ್ಬಂದಿಗೆ ವೈದ್ಯಕೀಯ ತಂಡ ಚಿಕಿತ್ಸೆ ನೀಡಿದೆ. ಇದೀಗ ಸಿಬ್ಬಂದಿಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
ಪ್ರಯಾಣಿಕರಿಗಾಗಿ ಪರ್ಯಾಯ ವಿಮಾನ ವ್ಯವಸ್ಥೆ
ಪ್ರಯಾಣಿಕರ ಮುಂದಿನ ಪ್ರಯಾಣಕ್ಕಾಗಿ ಇಂಡಿಗೋ ಪರ್ಯಾಯ ವಿಮಾನ ಮತ್ತು ಹೊಸ ಸಿಬ್ಬಂದಿಯ ವ್ಯವಸ್ಥೆ ಮಾಡಿದೆ. ಮಸ್ಕತ್ ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದ ಪ್ರಯಾಣಿಕರಿಗೆ ಉಪಾಹಾರ ಹಾಗೂ ಇತರ ಅಗತ್ಯ ನೆರವು ಒದಗಿಸಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.
ಬೆಂಗಳೂರಿಗೆ ತೆರಳುವ ಪರ್ಯಾಯ ವಿಮಾನದ ಕುರಿತು ಪ್ರಯಾಣಿಕರಿಗೆ ಕಾಲಕಾಲಕ್ಕೆ ಮಾಹಿತಿ ನೀಡಲಾಗುತ್ತಿದೆ. ವಿಮಾನ ಡೈವರ್ಟ್ ಆದ ಕಾರಣ ಉಂಟಾದ ಅನಾನುಕೂಲತೆಗೆ ಇಂಡಿಗೋ ಕ್ಷಮೆಯಾಚಿಸಿದ್ದು, ಪ್ರಯಾಣಿಕರ ತೊಂದರೆಯನ್ನು ಕಡಿಮೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದೆ. “ನಮ್ಮ ಗ್ರಾಹಕರು, ಸಿಬ್ಬಂದಿ ಮತ್ತು ವಿಮಾನದ ಸುರಕ್ಷತೆಯೇ ಇಂಡಿಗೋಗೆ ಮೊದಲ ಆದ್ಯತೆ” ಎಂದು ಸಂಸ್ಥೆ ತಿಳಿಸಿದೆ. ಆದರೆ 6E 1302 ವಿಮಾನ ಬೆಂಗಳೂರಿಗೆ ತಲುಪುವ ಪರಿಷ್ಕೃತ ಅಂದಾಜು ಸಮಯವನ್ನು ಇಂಡಿಗೋ ಇನ್ನೂ ಪ್ರಕಟಿಸಿಲ್ಲ.

