
ಕೋಲ್ಕತ್ತಾದ ಫ್ರೀ ಸ್ಕೂಲ್ ಸ್ಟ್ರೀಟ್‌ನಲ್ಲಿರುವ ಹೋಟೆಲ್‌ನಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮಗು ಸೇರಿದಂತೆ ಕನಿಷ್ಠ 9 ಮಂದಿ ಮೃತಪಟ್ಟಿದ್ದಾರೆ.
ಕೋಲ್ಕತ್ತಾ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ: ಮಗು ಸೇರಿ 9 ಮಂದಿ ಸಾವು
ಪ್ರಾಥಮಿಕ ವರದಿ ಪ್ರಕಾರ, ಹೋಟೆಲ್‌ನಲ್ಲಿನ ಎಸಿ ಸ್ಫೋಟಗೊಂಡಿರುವುದು ಬೆಂಕಿಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಆದರೆ ಬೆಂಕಿಗೆ ನಿಖರ ಕಾರಣ ಇನ್ನೂ ದೃಢಪಟ್ಟಿಲ್ಲ. ಘಟನೆ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಪಶ್ಚಿಮ ಬಂಗಾಳದ ಕೋಲ್ಕತ್ತಾದ ಫ್ರೀ ಸ್ಕೂಲ್ ಸ್ಟ್ರೀಟ್‌ನಲ್ಲಿರುವ ಹೋಟೆಲ್‌ನಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮಗು ಸೇರಿದಂತೆ ಕನಿಷ್ಠ 9 ಮಂದಿ ಮೃತಪಟ್ಟಿದ್ದಾರೆ. ಬೆಳಗಿನ ಜಾವ ಸುಮಾರು 2 ಗಂಟೆಗೆ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದೊಳಗಿದ್ದ ಹಲವರು ಸಿಲುಕಿಕೊಂಡಿದ್ದರು.
ಎಸಿ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡ ಶಂಕೆ
ಪ್ರಾಥಮಿಕ ವರದಿ ಪ್ರಕಾರ, ಹೋಟೆಲ್‌ನಲ್ಲಿನ ಏರ್ ಕಂಡೀಷನರ್ ಸ್ಫೋಟಗೊಂಡಿರುವುದು ಬೆಂಕಿಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಆದರೆ ಬೆಂಕಿಗೆ ನಿಖರ ಕಾರಣ ಇನ್ನೂ ದೃಢಪಟ್ಟಿಲ್ಲ. ಘಟನೆ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಬೆಂಕಿ ಕಾಣಿಸಿಕೊಂಡ ಮಾಹಿತಿ ಲಭ್ಯವಾದ ತಕ್ಷಣ ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದವು. ವಿಪತ್ತು ನಿರ್ವಹಣಾ ತಂಡವೂ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಕಟ್ಟಡದೊಳಗೆ ಸಿಲುಕಿದ್ದವರನ್ನು ಹೊರಕ್ಕೆ ಕರೆತರಲು ಅಗ್ನಿಶಾಮಕ ಸಿಬ್ಬಂದಿ ಹಲವು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದರು.
ನಂತರ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆ ಕೋಲ್ಕತ್ತಾದ ನ್ಯೂ ಮಾರ್ಕೆಟ್ ಸಮೀಪದ ಫ್ರೀ ಸ್ಕೂಲ್ ಸ್ಟ್ರೀಟ್‌ನಲ್ಲಿ ನಡೆದಿದೆ. ಈ ಪ್ರದೇಶವು ನಗರದ ಅತ್ಯಂತ ಜನನಿಬಿಡ ಪ್ರದೇಶಗಳಲ್ಲಿ ಒಂದಾಗಿದೆ. ಘಟನೆಯ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

