ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ಸಾವು
x

ಮಹಾರಾಷ್ಟ್ರದ ಭಂಡಾರದಲ್ಲಿ ಟ್ರಕ್‌-ಪಿಕಪ್‌ ನಡುವೆ ಭೀಕರ ಡಿಕ್ಕಿ ಸಂಭವಿಸಿ ಮೂವರು ಮಕ್ಕಳು ಸೇರಿ ಎಂಟು ಮಂದಿ ಮೃತಪಟ್ಟಿದ್ದಾರೆ.

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ಸಾವು

ವೇಗವಾಗಿ ಬಂದಿದ್ದ ಟ್ರಕ್‌ ಪಿಕಪ್‌ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Click the Play button to hear this message in audio format

ಮಹಾರಾಷ್ಟ್ರದ ಭಂಡಾರ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಕ್ಕಳು ಸೇರಿದಂತೆ ಎಂಟು ಮಂದಿ ಮೃತಪಟ್ಟಿದ್ದಾರೆ. ಟ್ರಕ್‌ ಹಾಗೂ ಪಿಕಪ್‌ ವಾಹನದ ನಡುವೆ ಡಿಕ್ಕಿ ಸಂಭವಿಸಿದ್ದು, ಎಂಟು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನಾಗ್ಪುರ-ರಾಯ್‌ಪುರ ರಾಷ್ಟ್ರೀಯ ಹೆದ್ದಾರಿಯ ಪಿಂಪಲಗಾಂವ್‌ ಸಡಕ್‌ ಸಮೀಪದ ಭಾವು ಧಾಬಾ ಬಳಿ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬಂದಿದ್ದ ಟ್ರಕ್‌ ಪಿಕಪ್‌ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಸಕೋಲಿ ಉಪಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.

ಎಂಟು ಮಂದಿ ಸಾವು ದೃಢಪಡಿಸಿದ ಎಸ್‌ಪಿ

ಭಂಡಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನೂರುಲ್‌ ಹಸನ್‌ ಘಟನೆ ಕುರಿತು ಮಾಹಿತಿ ನೀಡಿದ್ದು, ಪಿಂಪಲಗಾಂವ್‌ ಸಡಕ್ ಬಳಿ ಟ್ರಕ್‌ ಪಿಕಪ್‌ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಗಾಯಗೊಂಡ ಮೂವರನ್ನು ಸಕೋಲಿ ಉಪಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

Read More
Next Story