x

ಶರದ್ ಪವಾರ್-ಏಕನಾಥ್ ಶಿಂಧೆ ಭೇಟಿ! ಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ?

ಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ರಾಜಕೀಯ ಲೆಕ್ಕಾಚಾರ ಶುರುವಾಗಿದೆ. ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಸಭೆ ಮುಗಿದ ತಕ್ಷಣ, ಎನ್‌ಸಿಪಿ (ಶರದ್ ಪವಾರ್ ಬಣ) ಮುಖ್ಯಸ್ಥ ಶರದ್ ಪವಾರ್, ನೇರವಾಗಿ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಕಚೇರಿಗೆ ಭೇಟಿ ನೀಡಿದರು.


ಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ರಾಜಕೀಯ ಲೆಕ್ಕಾಚಾರ ಶುರುವಾಗಿದೆ. ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಸಭೆ ಮುಗಿದ ತಕ್ಷಣ, ಎನ್‌ಸಿಪಿ (ಶರದ್ ಪವಾರ್ ಬಣ) ಮುಖ್ಯಸ್ಥ ಶರದ್ ಪವಾರ್, ನೇರವಾಗಿ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಕಚೇರಿಗೆ ಭೇಟಿ ನೀಡಿದರು. ಆ ವೇಳೆ ಕ್ಯಾಬಿನೆಟ್ ಸಭೆಯಲ್ಲಿದ್ದ ಶಿಂಧೆ, ಸಭೆಯನ್ನೇ ಮಧ್ಯದಲ್ಲಿ ನಿಲ್ಲಿಸಿ ಪವಾರ್ ಅವರನ್ನು ಸ್ವಾಗತಿಸಿದರು. ಇಬ್ಬರೂ ಸುಮಾರು 15 ನಿಮಿಷಗಳ ಕಾಲ ಮಾತುಕತೆ ನಡೆಸಿದರು.

ಏನು ಚರ್ಚೆಯಾಯಿತು ಎಂಬುದು ಬಹಿರಂಗವಾಗಿಲ್ಲ. ಆದರೆ ಈ ಭೇಟಿ ಈಗ ಭಾರೀ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಏಕೆಂದರೆ, ಪವಾರ್ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿ ಮಾಡದೆ, ನೇರವಾಗಿ ಶಿಂಧೆ ಅವರನ್ನು ಭೇಟಿ ಮಾಡಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

Read More
Next Story