ಮಣಿಪುರ ಆಹಾರ ವಿಷಬಾಧೆಯಿಂದ 75 ಬಿಎಸ್‌ಎಫ್ ಸಿಬ್ಬಂದಿ ಸೇರಿ 78 ಮಂದಿ ಆಸ್ಪತ್ರೆಗೆ ದಾಖಲು
x

ಮಣಿಪುರದಲ್ಲಿ ಶಂಕಿತ ಆಹಾರ ವಿಷಬಾಧೆಯಿಂದ 75 ಬಿಎಸ್‌ಎಫ್ ಸಿಬ್ಬಂದಿ ಸೇರಿದಂತೆ 78 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಣಿಪುರ ಆಹಾರ ವಿಷಬಾಧೆಯಿಂದ 75 ಬಿಎಸ್‌ಎಫ್ ಸಿಬ್ಬಂದಿ ಸೇರಿ 78 ಮಂದಿ ಆಸ್ಪತ್ರೆಗೆ ದಾಖಲು

ಆಸ್ಪತ್ರೆಗೆ ದಾಖಲಾದ ಎಲ್ಲರೂ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಕೆಲವೇ ಗಂಟೆಗಳಲ್ಲಿ ಚೇತರಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ವೈದ್ಯರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


Click the Play button to hear this message in audio format

ಮಣಿಪುರದಲ್ಲಿ ಶಂಕಿತ ಆಹಾರ ವಿಷಬಾಧೆಯಿಂದ ಗಡಿ ಭದ್ರತಾ ಪಡೆ (ಬಿಎಸ್‌ಎಫ್)ಯ 75 ಸಿಬ್ಬಂದಿ ಸೇರಿದಂತೆ ಒಟ್ಟು 78 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂಫಾಲ್‌ನ ಪ್ರಾದೇಶಿಕ ವೈದ್ಯಕೀಯ ವಿಜ್ಞಾನ ಸಂಸ್ಥೆ (RIMS) ಆಸ್ಪತ್ರೆಗೆ ದಾಖಲಾಗಿರುವ ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಉಪಾಹಾರ ಸೇವಿಸಿದ ಬಳಿಕ ಪದೇಪದೇ ವಾಂತಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಿಎಸ್‌ಎಫ್ ಸಿಬ್ಬಂದಿ ಹಾಗೂ ಮೂವರು ನಾಗರಿಕರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದ್ದು, ದೇಹದಲ್ಲಿ ದ್ರವಾಂಶದ ಕೊರತೆ ಉಂಟಾಗದಂತೆ ಅಗತ್ಯ ದ್ರವಗಳನ್ನು ಒದಗಿಸಲಾಗುತ್ತಿದೆ ಎಂದು ಆರ್‌ಐಎಂಎಸ್ ವೈದ್ಯಕೀಯ ಅಧೀಕ್ಷಕ ಪ್ರೊಫೆಸರ್ ಡಾ. ರಾಮೇಶ್ವರ್ ಸಿಂಗ್ ತಿಳಿಸಿದ್ದಾರೆ.

ಆಸ್ಪತ್ರೆಗೆ ದಾಖಲಾದ ಎಲ್ಲರೂ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಕೆಲವೇ ಗಂಟೆಗಳಲ್ಲಿ ಚೇತರಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ವೈದ್ಯರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆಹಾರ ವಿಷಬಾಧೆಗೆ ನಿಖರ ಕಾರಣವೇನು ಎಂಬ ಬಗ್ಗೆ ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.

Read More
Next Story