ತಿರುಪತಿಯ ಶ್ರೀಸಿಟಿಯಲ್ಲಿ ಭಾರೀ ಸ್ಫೋಟ; 10ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಶಂಕೆ
x

ತಿರುಪತಿ ಜಿಲ್ಲೆಯ ಶ್ರೀಸಿಟಿಯ ಟಿಐಎಲ್‌ ಹೆಲ್ತ್‌ಕೇರ್‌ ಘಟಕದಲ್ಲಿ ಬೆಳಗ್ಗೆ ಭಾರೀ ಸ್ಫೋಟ ಸಂಭವಿಸಿದ್ದು, ಹಲವು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ತಿರುಪತಿಯ ಶ್ರೀಸಿಟಿಯಲ್ಲಿ ಭಾರೀ ಸ್ಫೋಟ; 10ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಶಂಕೆ

ಸ್ಫೋಟದ ಮಾಹಿತಿ ತಿಳಿಯುತ್ತಿದ್ದಂತೆ ಸಂಬಂಧಪಟ್ಟ ಅಧಿಕಾರಿಗಳು, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.


Click the Play button to hear this message in audio format

ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ಸತ್ಯವೇಡು ಮಂಡಲ ವ್ಯಾಪ್ತಿಯ ಶ್ರೀಸಿಟಿ ವಿಶೇಷ ಆರ್ಥಿಕ ವಲಯದಲ್ಲಿರುವ ಟಿಐಎಲ್‌ ಹೆಲ್ತ್‌ಕೇರ್‌ ಕಂಪನಿಯಲ್ಲಿ ಶನಿವಾರ ಬೆಳಗ್ಗೆ ಭಾರೀ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಸಾಧ್ಯತೆ ಇದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಬೆಳಗ್ಗೆ ಸುಮಾರು 8 ಗಂಟೆಗೆ ಸ್ಫೋಟ ಸಂಭವಿಸಿದ್ದು, ಘಟನೆಯಿಂದ ಕಂಪನಿ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸ್ಫೋಟ ಸಂಭವಿಸಿದ ಸಂದರ್ಭದಲ್ಲಿ ರಾತ್ರಿ ಪಾಳಿಯಲ್ಲಿ ಹಲವು ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಅವರು ಸ್ಫೋಟದಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಫೋಟದ ತೀವ್ರತೆಗೆ ಕಂಪನಿಯ ಆವರಣದಲ್ಲಿ ಭಾರಿ ಹಾನಿಯಾಗಿರುವುದಾಗಿ ಪ್ರಾಥಮಿಕ ಮಾಹಿತಿ ತಿಳಿಸಿದೆ.

10ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಶಂಕೆ

ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಸಾಧ್ಯತೆ ಇದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಆದರೆ ಸಾವಿನ ಸಂಖ್ಯೆ ಮತ್ತು ಗಾಯಾಳುಗಳ ನಿಖರ ಸಂಖ್ಯೆ ಕುರಿತು ಅಧಿಕೃತವಾಗಿ ಇನ್ನೂ ದೃಢೀಕರಣವಾಗಿಲ್ಲ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಧಿಕಾರಿಗಳು ಹಾಗೂ ತುರ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸ್ಫೋಟಕ್ಕೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Read More
Next Story