NEET UG 2026 cancellation: NTA takes important decision after paper leak; orders investigation
x

ಸಾಂದರ್ಭಿಕ ಚಿತ್ರ

NEET UG 2026 ರದ್ದು: ಪತ್ರಿಕೆ ಸೋರಿಕೆ ಹಿನ್ನೆಲೆ NTA ಮಹತ್ವದ ನಿರ್ಧಾರ; ಸಿಬಿಐ ತನಿಖೆಗೆ ಆದೇಶ

ಕಾನೂನು ಜಾರಿ ಸಂಸ್ಥೆಗಳು ಮತ್ತು ಕೇಂದ್ರ ಅಧಿಕಾರಿಗಳು ನಡೆಸಿದ ಜಂಟಿ ತನಿಖೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು, ಪರೀಕ್ಷೆಯ ಪಾರದರ್ಶಕತೆಗೆ ಧಕ್ಕೆ ಬಂದಿರುವುದು ಸಾಬೀತಾಗಿದೆ.


Click the Play button to hear this message in audio format

ಲಕ್ಷಾಂತರ ವೈದ್ಯಕೀಯ ಆಕಾಂಕ್ಷಿಗಳು ಎದುರುನೋಡುತ್ತಿದ್ದ NEET UG 2026 ಪರೀಕ್ಷೆಯನ್ನು ರದ್ದುಗೊಳಿಸಿರುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಇಂದು ಮಹತ್ವದ ಘೋಷಣೆ ಮಾಡಿದೆ. ಮೇ 3 ರಂದು ನಡೆದಿದ್ದ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಈ ಕಠಿಣ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕಾನೂನು ಜಾರಿ ಸಂಸ್ಥೆಗಳು ಮತ್ತು ಕೇಂದ್ರ ಅಧಿಕಾರಿಗಳು ನಡೆಸಿದ ಜಂಟಿ ತನಿಖೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು, ಪರೀಕ್ಷೆಯ ಪಾರದರ್ಶಕತೆಗೆ ಧಕ್ಕೆ ಬಂದಿರುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲು ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ತಿಳಿಸಿದೆ. ಅಲ್ಲದೆ, ಈ ಪ್ರಕರಣದ ಸಂಪೂರ್ಣ ತನಿಖೆಯನ್ನು ಕೇಂದ್ರ ತನಿಖಾ ದಳಕ್ಕೆ (CBI) ವಹಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ವಿದ್ಯಾರ್ಥಿಗಳಿಗೆ ಪ್ರಮುಖ ಸೂಚನೆಗಳು

ಈ ಕುರಿತು ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ, ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದೆ. ಮರುಪರೀಕ್ಷೆಗೆ ಯಾವುದೇ ಹೊಸ ನೋಂದಣಿ ಅಗತ್ಯವಿಲ್ಲ. ಹಳೆಯ ನೋಂದಣಿ ಮಾಹಿತಿಯೇ ಮುಂದುವರಿಯಲಿದೆ. ಅಭ್ಯರ್ಥಿಗಳಿಂದ ಯಾವುದೇ ಹೆಚ್ಚುವರಿ ಶುಲ್ಕ ಪಡೆಯಲಾಗುವುದಿಲ್ಲ. ಈಗಾಗಲೇ ಪಾವತಿಸಿರುವ ಶುಲ್ಕವನ್ನು ವಿದ್ಯಾರ್ಥಿಗಳಿಗೆ ಮರುಪಾವತಿಸಿ, ಸಂಸ್ಥೆಯೇ ತನ್ನ ಸ್ವಂತ ಸಂಪನ್ಮೂಲದಿಂದ ಪರೀಕ್ಷೆ ನಡೆಸಲಿದ್ದು, ಹೊಸದಾಗಿ ನೀಡಲಾಗುವ ಪ್ರವೇಶ ಪತ್ರಗಳ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡಲಾಗುವುದು ಎಂದು ತಿಳಿಸಿದೆ.

ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ವಾಗ್ದಾಳಿ

ಪರೀಕ್ಷೆ ರದ್ದತಿ ವಿಚಾರ ರಾಜಕೀಯ ವಲಯದಲ್ಲೂ ಭಾರಿ ಸಂಚಲನ ಮೂಡಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈ ಕುರಿತು ಎಕ್ಸ್ (ಟ್ವಿಟರ್) ನಲ್ಲಿ ಪೋಸ್ಟ್ ಮಾಡಿದ್ದು, "NEET 2026 ಒಂದು ಹರಾಜು ಪ್ರಕ್ರಿಯೆಯಾಗಿ ಬದಲಾಗಿದೆ. 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡಲಾಗುತ್ತಿದೆ. ಪ್ರಧಾನಿ ಮೋದಿಯವರ ಸರ್ಕಾರ ಭಾರತದ ಯುವಕರ ಕನಸುಗಳಿಗೆ ದೊಡ್ಡ ಬೆದರಿಕೆಯಾಗಿದೆ," ಎಂದು ಕಿಡಿಕಾರಿದ್ದಾರೆ.

ಮತ್ತೊಂದೆಡೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೂ ಸಹ ಪತ್ರಿಕೆ ಸೋರಿಕೆ ಪ್ರಕರಣದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, "ಸರ್ಕಾರವು ವಿದ್ಯಾರ್ಥಿಗಳ ನಂಬಿಕೆಯನ್ನು ದ್ರೋಹ ಮಾಡಿದೆ ಎಂದು ಟೀಕಿಸಿದ್ದಾರೆ".

Read More
Next Story