
ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಟ್ರಕ್ ಬ್ರೇಕ್ ವೈಫಲ್ಯದಿಂದ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ.
Deadly Accident| ಮಿರ್ಜಾಪುರ ಸರಣಿ ಅಪಘಾತ: ಲಾರಿ ಡಿಕ್ಕಿ, ಬೊಲೆರೊ ಬೆಂಕಿಗಾಹುತಿ, 11 ಸಾವು
ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಟ್ರಕ್ ಬ್ರೇಕ್ ವೈಫಲ್ಯದಿಂದ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. ಬೆಂಕಿಗಾಹುತಿಯಾದ ಬೊಲೆರೊದಲ್ಲಿನ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.
ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಡ್ರಮಂಡ್‌ಗಂಜ್ ಕಣಿವೆ ಪ್ರದೇಶದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 11 ಮಂದಿ ಮೃತಪಟ್ಟಿದ್ದಾರೆ. ಚಲಿಸುತ್ತಿದ್ದ ಟ್ರಕ್‌ನ ಬ್ರೇಕ್ ವೈಫಲ್ಯಗೊಂಡಿದ್ದೇ ಈ ದುರಂತಕ್ಕೆ ಕಾರಣವಾಗಿದೆ. ಬುಧವಾರ ರಾತ್ರಿ ಸುಮಾರು 8.30ರ ವೇಳೆಗೆ ಲಸೋಡಾ ಪ್ರದೇಶದ ಇಳಿಜಾರಿನಲ್ಲಿ ಚಲಿಸುತ್ತಿದ್ದ ಟ್ರಕ್‌ನ ಬ್ರೇಕ್ ಹಠಾತ್ ಕೈಕೊಟ್ಟಿದೆ. ನಿಯಂತ್ರಣ ತಪ್ಪಿದ ಟ್ರಕ್ ಮುಂಭಾಗದಲ್ಲಿದ್ದ ಕಂಟೈನರ್ ಲಾರಿಗೆ ಜೋರಾಗಿ ಡಿಕ್ಕಿ ಹೊಡೆದಿದೆ. ಈ ವೇಳೆ ಎರಡು ಲಾರಿಗಳ ನಡುವೆ ಸಿಲುಕಿದ ಆಲ್ಟೋ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
यूपी के मिर्जापुर में एक ट्रक का ब्रेक फेल हो गया. जिस वजह से दर्दनाक हादसा हुआ. और 11 लोगों की मौत हो गई.
— Priya singh (@priyarajputlive) April 23, 2026
एक कार दो ट्रकों के बीच फंस गई. और उसमें आग लग गई. जिस वजह से कार सवार 8 लोग जिंदा जल गए. pic.twitter.com/bkpEkjaKql
ಇದೇ ವೇಳೆ ವೇಗವಾಗಿ ಬಂದ ಟ್ರಕ್ ಮತ್ತೊಂದು ಬೊಲೆರೊ ವಾಹನಕ್ಕೂ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಬೊಲೆರೊದಲ್ಲಿ ತಕ್ಷಣವೇ ಬೆಂಕಿ ಕಾಣಿಸಿಕೊಂಡಿದೆ. ವಾಹನದೊಳಗೆ ಸಿಲುಕಿದ್ದ ಪ್ರಯಾಣಿಕರು ಹೊರಬರಲಾಗದೆ ಸಜೀವ ದಹನವಾಗಿದ್ದಾರೆ. ಘಟನೆಯಲ್ಲಿ ಟ್ರಕ್ ಚಾಲಕನಿಗೂ ತೀವ್ರ ಗಾಯಗಳಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
#BreakingNews: मिर्जापुर में भीषण सड़क हादसा, ट्रक और बोलेरो की टक्कर में जिंदा जले 11 लोग, एक अनियंत्रित ट्रक ने बोलेरो समेत कई गाड़ियों को टक्कर मार दी. टक्कर इतनी भीषण थी कि बोलेरो गाड़ी में आग लग गई और उसमें सवार सभी 11 लोगों की जलकर मौत हो गई. #Mirzapur #RoadAccident #UP https://t.co/xdMOdw4Ed0 pic.twitter.com/8Gi8VQLqSK
— Journalist Ravendra kumar (@Chhotukingoffi1) April 22, 2026
ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಸ್ಥಳೀಯರ ನೆರವಿನೊಂದಿಗೆ ಬೆಂಕಿ ನಂದಿಸಿ, ಮೃತದೇಹಗಳನ್ನು ಹೊರತೆಗೆಯಲಾಗಿದೆ. ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದ್ದು, ಈಗಾಗಲೇ ಕೆಲವು ಕುಟುಂಬ ಸದಸ್ಯರನ್ನು ಸಂಪರ್ಕಿಸಲಾಗಿದೆ ಎಂದು ಮಿರ್ಜಾಪುರದ ಹಿರಿಯ ಪೊಲೀಸ್ ಅಧಿಕಾರಿ ಅಪರ್ಣಾ ರಜತ್ ಕೌಶಿಕ್ ತಿಳಿಸಿದ್ದಾರೆ. ಸದ್ಯ ಅಪಘಾತಕ್ಕೀಡಾದ ವಾಹನಗಳನ್ನು ರಸ್ತೆಯಿಂದ ತೆರವುಗೊಳಿಸಲಾಗಿದ್ದು, ಸಂಚಾರ ವ್ಯವಸ್ಥೆಯನ್ನು ಯಥಾಸ್ಥಿತಿಗೆ ತರಲಾಗಿದೆ.

