
ಸಾಂದರ್ಭಿಕ ಚಿತ್ರ
11 ದಿನದಲ್ಲಿ 4ನೇ ಬಾರಿ ಪೆಟ್ರೋಲ್, ಡೀಸೆಲ್ ದರ ಏರಿಕೆ; ವಾಹನ ಸವಾರರು ಕಂಗಾಲು
ಪೆಟ್ರೋಲ್ ದರ ಲೀಟರ್ಗೆ 2.61 ರೂ. ಮತ್ತು ಡೀಸೆಲ್ 2.71 ರೂ. ಹೆಚ್ಚಳವಾಗಿದೆ. ಪರಿಷ್ಕೃತ ಪೆಟ್ರೋಲ್, ಡೀಸೆಲ್ ದರ ತಕ್ಷಣದಿಂದಲೇ ಜಾರಿಯಾಗಿದೆ.
ದೇಶದಲ್ಲಿ ಇಂಧನ ದರಗಳ ಏರಿಕೆ ನಾಗಾಲೋಟದಲ್ಲಿ ಸಾಗುತ್ತಿದೆ. ತೈಲ ಕಂಪನಿಗಳು 11 ದಿನಗಳಲ್ಲಿ 4ನೇ ಬಾರಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿವೆ.
ಪೆಟ್ರೋಲ್ ದರ ಲೀಟರ್ಗೆ 2.61 ರೂ. ಮತ್ತು ಡೀಸೆಲ್ 2.71 ರೂ. ಹೆಚ್ಚಳವಾಗಿದೆ. ಪರಿಷ್ಕೃತ ಪೆಟ್ರೋಲ್, ಡೀಸೆಲ್ ದರ ತಕ್ಷಣದಿಂದಲೇ ಜಾರಿಯಾಗಿದೆ.
ಇಂಧನ ದರ ಹೆಚ್ಚಳದ ಬಳಿಕ ಬೆಂಗಳೂರಲ್ಲಿ ಲೀಟರ್ ಪೆಟ್ರೋಲ್ ದರ 110.93 ರೂ. ಮತ್ತು 95.99 ರೂ.ಗಳಿಗೆ ಏರಿಕೆಯಾಗಿದೆ. ಮೇ 15ರಂದು ಮೊದಲ ಬಾರಿಗೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಲಾಗಿತ್ತು. ಅಂದಿನಿಂದ ಈವರೆಗೆ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಸುಮಾರು 7.50 ರೂ. ಏರಿಕೆಯಾಗಿದೆ.
ಮಧ್ಯ ಪ್ರಾಚ್ಯ ಬಿಕ್ಕಟ್ಟಿನ ಹಿನ್ನೆಲೆ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ರೂಪಾಯಿ ಮೌಲ್ಯ ಕುಸಿದಿದೆ. ತೈಲ ಕಂಪನಿಗಳು ನಷ್ಟದಿಂದ ಪಾರಾಗಲು ಇಂಧನ ದರ ಏರಿಕೆ ಅನಿವಾರ್ಯವಾಗಿದೆ.
ಪಶ್ಚಿಮ ಏಷ್ಯಾದ ಭೌಗೋಳಿಕ ರಾಜಕೀಯ ಉದ್ವಿಗ್ನತೆ ಮತ್ತು ಜಾಗತಿಕ ಕಚ್ಚಾ ತೈಲ ದರ ಏರಿಕೆ ಹಾಗೂ ತೈಲ ಕಂಪನಿಗಳ ನಷ್ಟವೇ ಇಂಧನ ದರ ಏರಿಕೆಗೆ ಪ್ರಮುಖ ಕಾರಣ ಎಂದು ಸರ್ಕಾರಿ ಸ್ವಾಮ್ಯದ ಆಯಿಲ್ ಆ್ಯಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೆಷನ್ ಲಿಮಿಟೆಡ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಹಾರ್ಮುಜ್ ಜಲಸಂಧಿಯಲ್ಲಿ ಹಲವು ತಿಂಗಳಿಂದ ಇಂಧನ ತುಂಬಿದ ಹಡಗುಗಳು ಇದ್ದಲ್ಲೇ ಇವೆ. ಇದರಿಂದ ಜಾಗತಿಕ ಇಂಧನ ಸಾಗಣೆ ವ್ಯವಸ್ಥೆಯ ಮೇಲೆ ಒತ್ತಡ ಹೆಚ್ಚಿದ್ದು, ತೈಲ ಮತ್ತು ಅನಿಲ ಆಮದು ಮಾಡಿಕೊಳ್ಳುವ ದೇಶಗಳ ಆರ್ಥಿಕತೆಯ ಮೇಲೂ ಪರಿಣಾಮ ಬೀರಿದೆ.
ಮಧ್ಯ ಪ್ರಾಚ್ಯ ಬಿಕ್ಕಟ್ಟಿನ ಅವಧಿಯಲ್ಲಿ ಕಚ್ಚಾ ತೈಲದ ಬೆಲೆ ಬ್ಯಾರೆಲ್‌ಗೆ 65-70 ಡಾಲರ್‌ನಿಂದ 110-115 ಡಾಲರ್‌ಗೆ ಏರಿಕೆಯಾಗಿದೆ.

