ರಾಘವ್ ಚಡ್ಡಾ ಹಾಗೂ ಇತರ 6 ಸಂಸದರ ಎಎಪಿ ರಾಜೀನಾಮೆ: ಅಣ್ಣಾ ಹಜಾರೆ ಹೇಳುವುದೇನು?
x

ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ತಮ್ಮದೇ ಆದ ಅಭಿಪ್ರಾಯ ಹೊಂದುವ ಹಕ್ಕಿದೆ. 

ರಾಘವ್ ಚಡ್ಡಾ ಹಾಗೂ ಇತರ 6 ಸಂಸದರ ಎಎಪಿ ರಾಜೀನಾಮೆ: ಅಣ್ಣಾ ಹಜಾರೆ ಹೇಳುವುದೇನು?

ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ತಮ್ಮದೇ ಆದ ಅಭಿಪ್ರಾಯ ಹೊಂದುವ ಹಕ್ಕಿದೆ.


Click the Play button to hear this message in audio format

ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದರಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್ ಸೇರಿದಂತೆ ಒಟ್ಟು 7 ಮಂದಿ ಎಎಪಿ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಗಿರುವ ಬೆಳವಣಿಗೆಯ ಕುರಿತು ಹಿರಿಯ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಪ್ರತಿಕ್ರಿಯಿಸಿದ್ದು, ಎಲ್ಲರಿಗೂ ತಮ್ಮದೇ ಅಭಿಪ್ರಾಯಗಳಿವೆ ಎಂದಿದ್ದಾರೆ.

ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ತಮ್ಮದೇ ಆದ ಅಭಿಪ್ರಾಯ ಹೊಂದುವ ಹಕ್ಕಿದೆ. ಎಲ್ಲಿರಬೇಕು, ಎಲ್ಲಿಗೆ ಹೋಗಬೇಕು ಎಂಬುದು ಅವರ ವೈಯಕ್ತಿಕ ಆಯ್ಕೆ" ಎಂದು ಹೇಳಿದ್ದಾರೆ.

"ಆಮ್ ಆದ್ಮಿ ಪಕ್ಷವು ಸರಿಯಾದ ಹಾದಿಯಲ್ಲಿ ನಡೆದಿದ್ದರೆ, ರಾಘವ್ ಚಡ್ಡಾ ಮತ್ತು ಇತರರು ಪಕ್ಷವನ್ನು ತೊರೆಯುತ್ತಿರಲಿಲ್ಲ. ಅವರು ಪಕ್ಷದೊಳಗೆ ಒಂದಲ್ಲಾ ಒಂದು ತೊಂದರೆ ಅಥವಾ ಸಮಸ್ಯೆಗಳನ್ನು ಎದುರಿಸಿರಬೇಕು. ಹಾಗಾಗಿಯೇ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಇದರಲ್ಲಿ ಆಮ್ ಆದ್ಮಿ ಪಕ್ಷದ ನಾಯಕತ್ವದ್ದೇ ತಪ್ಪಿದೆ," ಎಂದು ಅಣ್ಣಾ ಹಜಾರೆ ಅಭಿಪ್ರಾಯಪಟ್ಟಿದ್ದಾರೆ.

ಎಎಪಿಗೆ ಬಹುದೊಡ್ಡ ಹೊಡೆತ

ದೆಹಲಿಯಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ರಾಘವ್ ಚಡ್ಡಾ, ತಾವು ಸೇರಿದಂತೆ ಎಎಪಿಯ 7 ರಾಜ್ಯಸಭಾ ಸಂಸದರು (ರಾಜ್ಯಸಭೆಯಲ್ಲಿನ ಪಕ್ಷದ ಒಟ್ಟು ಬಲದ ಮೂರನೇ ಎರಡರಷ್ಟು) ಭಾರತೀಯ ಸಂವಿಧಾನದ ನಿಯಮಗಳ ಪ್ರಕಾರ ಬಿಜೆಪಿಯಲ್ಲಿ ವಿಲೀನಗೊಳ್ಳುತ್ತಿರುವುದಾಗಿ ಘೋಷಿಸಿದರು. ರಾಘವ್ ಚಡ್ಡಾ, ಸಂದೀಪ್ ಪಾಠಕ್ ಅವರಲ್ಲದೆ ಅಶೋಕ್ ಮಿತ್ತಲ್, ಹರ್ಭಜನ್ ಸಿಂಗ್, ರಜಿಂದರ್ ಗುಪ್ತಾ, ವಿಕ್ರಮ್ ಸಾಹ್ನಿ ಹಾಗೂ ಸ್ವಾತಿ ಮಲಿವಾಲ್ ಕೂಡ ಎಎಪಿ ತೊರೆದಿದ್ದಾರೆ.

ಅಣ್ಣಾ ಹಜಾರೆಯವರ ಭ್ರಷ್ಟಾಚಾರ ವಿರೋಧಿ ಆಂದೋಲನದ ಹಿನ್ನೆಲೆಯಲ್ಲಿ 2012ರಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಸ್ಥಾಪನೆಯಾದ ಆಮ್ ಆದ್ಮಿ ಪಕ್ಷಕ್ಕೆ, ಇದೀಗ ಪ್ರಮುಖ ನಾಯಕರುಗಳೇ ಪಕ್ಷ ತೊರೆದಿರುವುದು ಬಹುದೊಡ್ಡ ಹಿನ್ನಡೆಯಾಗಿದೆ.

Read More
Next Story