ಬಿಜೆಪಿ ಪಾದಯಾತ್ರೆಗೆ ರಾಜನಾಥ್ ಸಿಂಗ್ ಎಂಟ್ರಿ.. 15 ಸಾವಿರ ಕಾರ್ಯಕರ್ತರ ನಿರೀಕ್ಷೆ
ಕಲಬುರಗಿಯಲ್ಲಿ ಬಿಜೆಪಿ ಬೃಹತ್ ಪಾದಯಾತ್ರೆ ಆಯೋಜಿಸಿದೆ. ಬುಧವಾರದ ಮೆರವಣಿಗೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗಿಯಾಗಲಿದ್ದು, 15 ಸಾವಿರ ಕಾರ್ಯಕರ್ತರು ಸೇರುವ ನಿರೀಕ್ಷೆಯಿದೆ.
ಕಲಬುರಗಿಯಲ್ಲಿ ಬಿಜೆಪಿಯಿಂದ ಬೃಹತ್ ಪಾದಯಾತ್ರೆ ಆಯೋಜಿಸಲಾಗಿದೆ. ಬುಧವಾರ ನಡೆಯಲಿರುವ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ನಿರ್ಮೂಲನೆ ಮಾಡಿ’ ಪಾದಯಾತ್ರೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಗಂಜ್ ಪ್ರದೇಶದ ನಗರೇಶ್ವರ ಶಾಲೆಯಿಂದ ಆರಂಭವಾಗುವ ಪಾದಯಾತ್ರೆ ಜಗತ್ ಸರ್ಕಲ್‌ವರೆಗೆ ಸಾಗಲಿದೆ. ಸುಮಾರು 15 ಸಾವಿರ ಬಿಜೆಪಿ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಮಾಜಿ ಎಂಎಲ್‌ಸಿ ಅರುಣ್ ಶಹಾಪುರ ತಿಳಿಸಿದ್ದಾರೆ. ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಇಂತಹ ಪಾದಯಾತ್ರೆಗಳನ್ನು ಆಯೋಜಿಸಲು ಬಿಜೆಪಿ ಯೋಜಿಸಿದೆ.
Next Story

