ನೌಕಾಪಡೆ ರಾಜನಾಥ್ ಸಿಂಗ್ ವಿಶೇಷ ಪೂಜೆ
ವಿಶಾಖಪಟ್ಟಣದ ಹಿಂದೂಸ್ತಾನ್ ಶಿಪ್ಯಾರ್ಡ್ನಲ್ಲಿ FSS-1 ಉಡಾವಣಾ ಕಾರ್ಯಕ್ರಮ ನಡೆಯಿತು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿ ನೌಕಾಪಡೆಯ ಹಿರಿಯ ಅಧಿಕಾರಿಗಳು ಪೂಜೆಯಲ್ಲಿ ಪಾಲ್ಗೊಂಡರು.
ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಭಾರತೀಯ ನೌಕಾಪಡೆಯ ಮಹತ್ವದ ಕಾರ್ಯಕ್ರಮ ನೆರವೇರಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್, ಈಸ್ಟರ್ನ್ ನೇವಲ್ ಕಮಾಂಡ್ನ ಫ್ಲ್ಯಾಗ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಹಾಗೂ ಹಿಂದೂಸ್ತಾನ್ ಶಿಪ್ಯಾರ್ಡ್ ಲಿಮಿಟೆಡ್ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರು FSS-1 ಉಡಾವಣಾ ಕಾರ್ಯಕ್ರಮದ ಅಂಗವಾಗಿ ವಿಶೇಷ ಪೂಜೆ ನೆರವೇರಿಸಿದರು. ನೌಕಾಪಡೆಯ ಕಾರ್ಯಾಚರಣಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ FSS-1 ಪ್ರಮುಖ ಹೆಜ್ಜೆಯಾಗಿದೆ. ವಿಶಾಖಪಟ್ಟಣದ ಹಿಂದೂಸ್ತಾನ್ ಶಿಪ್ಯಾರ್ಡ್ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನೌಕಾಪಡೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ದೇಶದ ಸಮುದ್ರ ಗಡಿ ರಕ್ಷಣೆ ಹಾಗೂ ದೀರ್ಘಾವಧಿಯ ನೌಕಾ ಕಾರ್ಯಾಚರಣೆಗಳಿಗೆ ಅಗತ್ಯವಾದ ಸಾಮರ್ಥ್ಯವನ್ನು ಹೆಚ್ಚಿಸುವ ಉದ್ದೇಶದ ಈ ಯೋಜನೆ ಇದೀಗ ಗಮನ ಸೆಳೆದಿದೆ. ಕಾರ್ಯಕ್ರಮದ ವಿಶೇಷ ದೃಶ್ಯಗಳು ಇಲ್ಲಿವೆ.
Next Story

