x

ಜಲಪ್ರಳಯದಂತೆ ಹರಿದ ಜಲಪಾತಗಳು, ನದಿಗಳು

ಜಾರ್ಖಂಡ್‌ನ ರಾಂಚಿಯಲ್ಲಿ ಭಾರಿ ಮಳೆಯಿಂದ ನದಿಗಳು, ಅಣೆಕಟ್ಟುಗಳು ಹಾಗೂ ಜಲಪಾತಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ತಗ್ಗು ಪ್ರದೇಶಗಳಲ್ಲಿ ಪ್ರವಾಹದ ಆತಂಕ ಎದುರಾಗಿದೆ.


Click the Play button to hear this message in audio format

ಜಾರ್ಖಂಡ್‌ನ ರಾಂಚಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ನದಿಗಳು, ಅಣೆಕಟ್ಟುಗಳು ಹಾಗೂ ಜಲಪಾತಗಳಲ್ಲಿ ನೀರಿನ ಹರಿವು ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ. ಹಲವು ಜಲಮೂಲಗಳು ತುಂಬಿ ಹರಿಯುತ್ತಿದ್ದು, ಜೋನ್ಹಾ ಜಲಪಾತ ಮತ್ತು ಸೀತಾ ಫಾಲ್ಸ್‌ನಲ್ಲಿ ನೀರು ರಭಸವಾಗಿ ಧುಮ್ಮಿಕ್ಕುತ್ತಿದೆ. ಮಳೆಯ ಪ್ರಮಾಣ ಹೆಚ್ಚಾದಂತೆ ತಗ್ಗು ಪ್ರದೇಶಗಳಲ್ಲಿ ಪ್ರವಾಹದ ಆತಂಕವೂ ಎದುರಾಗಿದೆ. ಜಲಪಾತಗಳ ಭೋರ್ಗರೆತದ ದೃಶ್ಯಗಳು ಸ್ಥಳೀಯರನ್ನು ಹಾಗೂ ಪ್ರವಾಸಿಗರನ್ನು ಬೆಚ್ಚಿಬೀಳಿಸಿವೆ. ನದಿಗಳು ಹಾಗೂ ಅಣೆಕಟ್ಟುಗಳ ನೀರಿನ ಮಟ್ಟ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಪರಿಸ್ಥಿತಿಯ ಮೇಲೆ ನಿಗಾ ವಹಿಸಿದ್ದಾರೆ. ರಾಂಚಿ ಸೇರಿದಂತೆ ಜಾರ್ಖಂಡ್‌ನ ಹಲವು ಭಾಗಗಳಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಭಾರಿ ಮಳೆಯಿಂದ ಉಂಟಾಗಿರುವ ಈ ಜಲಪ್ರವಾಹದ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆಯುತ್ತಿವೆ.

Read More
Next Story