ರಷ್ಯಾ ಅಧ್ಯಕ್ಷ ಪುಟಿನ್ ಭಾರತಕ್ಕೆ ಆಗಮನ: ಬ್ರಿಕ್ಸ್‌ ಶೃಂಗಸಭೆಯಲ್ಲಿ ಭಾಗಿ
x

ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಭಾರತಕ್ಕೆ ಆಗಮಿಸಿದ್ದು, ಬ್ರಿಕ್ಸ್‌ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

ರಷ್ಯಾ ಅಧ್ಯಕ್ಷ ಪುಟಿನ್ ಭಾರತಕ್ಕೆ ಆಗಮನ: ಬ್ರಿಕ್ಸ್‌ ಶೃಂಗಸಭೆಯಲ್ಲಿ ಭಾಗಿ

ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌, ಇರಾನ್‌ ಅಧ್ಯಕ್ಷ ಮಸೂದ್‌ ಪೆಜೆಶ್ಕಿಯಾನ್‌, ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್‌ ರಾಮಫೋಸಾ, ಇಂಡೋನೇಷ್ಯಾ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ ಸೇರಿದಂತೆ ಹಲವು ರಾಷ್ಟ್ರಗಳ ಪ್ರಮುಖ ನಾಯಕರು ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.


Click the Play button to hear this message in audio format

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಮೂರು ದಿನಗಳ ಭಾರತ ಪ್ರವಾಸಕ್ಕಾಗಿ ಶುಕ್ರವಾರ ನವದೆಹಲಿಗೆ ಆಗಮಿಸಿದ್ದಾರೆ. 18ನೇ ಬ್ರಿಕ್ಸ್‌ ಶೃಂಗಸಭೆಯಲ್ಲಿ ಭಾಗವಹಿಸಲಿರುವ ಪುಟಿನ್‌, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಉಭಯ ದೇಶಗಳ ನಡುವಿನ ವ್ಯಾಪಾರ, ಹೂಡಿಕೆ ಮತ್ತು ಇಂಧನ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ.

ಬ್ರಿಕ್ಸ್‌ ಶೃಂಗಸಭೆಯಲ್ಲಿ ಜಾಗತಿಕ ಸವಾಲುಗಳ ಚರ್ಚೆ

ಶನಿವಾರದಿಂದ ನವದೆಹಲಿಯಲ್ಲಿ ನಡೆಯಲಿರುವ ಎರಡು ದಿನಗಳ ಬ್ರಿಕ್ಸ್‌ ಶೃಂಗಸಭೆಯಲ್ಲಿ ಆಹಾರ, ಇಂಧನ, ಆರೋಗ್ಯ, ವಿಪತ್ತು ನಿರ್ವಹಣೆ ಹಾಗೂ ಪ್ರಮುಖ ಪೂರೈಕೆ ಸರಪಳಿಗಳಲ್ಲಿ ಸದಸ್ಯ ರಾಷ್ಟ್ರಗಳ ಒಗ್ಗಟ್ಟನ್ನು ಮತ್ತಷ್ಟು ಬಲ ಪಡಿಸುವ ಕುರಿತು ಚರ್ಚೆ ನಡೆಯಲಿದೆ. ಜಾಗತಿಕ ಭೌಗೋಳಿಕ-ರಾಜಕೀಯ ಪರಿಸ್ಥಿತಿ ವಿಭಜನೆಯಾಗುತ್ತಿರುವ ಸಂದರ್ಭದಲ್ಲಿ ಬ್ರಿಕ್ಸ್‌ ಅನ್ನು ಪರಿಣಾಮಕಾರಿ ವೇದಿಕೆಯಾಗಿ ರೂಪಿಸುವುದು ಭಾರತದ ಪ್ರಮುಖ ಆದ್ಯತೆಯಾಗಿದೆ.

ಉಕ್ರೇನ್‌ ಯುದ್ಧ, ಪಶ್ಚಿಮ ಏಷ್ಯಾ ಬಿಕ್ಕಟ್ಟು, ವಿಶೇಷವಾಗಿ ಹಾರ್ಮುಜ್‌ ಜಲಸಂಧಿಯ ನಿರ್ಬಂಧ, ಹಾಗೂ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆಡಳಿತದ ವ್ಯಾಪಾರ ಮತ್ತು ಸುಂಕ ನೀತಿಗಳ ಪರಿಣಾಮಗಳ ನಡುವೆಯೇ ಈ ಬಾರಿಯ ಶೃಂಗಸಭೆ ನಡೆಯುತ್ತಿದೆ.

ಮೋದಿ-ಪುಟಿನ್‌ ದ್ವಿಪಕ್ಷೀಯ ಮಾತುಕತೆ

ಪುಟಿನ್‌ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಮಧ್ಯಾಹ್ನ ವ್ಯಾಪಕ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ರಕ್ಷಣಾ, ಇಂಧನ, ತಂತ್ರಜ್ಞಾನ, ಔಷಧ, ಹೂಡಿಕೆ, ವ್ಯಾಪಾರ ಮತ್ತು ಜನರ ನಡುವಿನ ಸಂಪರ್ಕ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಹಕಾರ ವೃದ್ಧಿಸುವ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ.

ಉಕ್ರೇನ್‌ ಜೊತೆಗಿನ ಯುದ್ಧದ ಬಳಿಕ ಬಳಿಕ ರಷ್ಯಾದ ಹೊರಗೆ ನಡೆಯುತ್ತಿರುವ ಬ್ರಿಕ್ಸ್‌ ಶೃಂಗಸಭೆಯಲ್ಲಿ ಪುಟಿನ್‌ ಮೊದಲ ಬಾರಿಗೆ ಖುದ್ದಾಗಿ ಭಾಗವಹಿಸುತ್ತಿದ್ದಾರೆ. ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌, ಇರಾನ್‌ ಅಧ್ಯಕ್ಷ ಮಸೂದ್‌ ಪೆಜೆಶ್ಕಿಯಾನ್‌, ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್‌ ರಾಮಫೋಸಾ, ಇಂಡೋನೇಷ್ಯಾ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ ಸೇರಿದಂತೆ ಹಲವು ರಾಷ್ಟ್ರಗಳ ಪ್ರಮುಖ ನಾಯಕರು ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

Read More
Next Story