x

SIR Protest| ರಾಹುಲ್‌ ಗಾಂಧಿ, ಪ್ರಿಯಾಂಕಾ, ಮೊಯಿತ್ರಾ ಬಂಧನ; ಗುರುವಾರ ಕರಾಳ ದಿನ

ಪ್ರತಿಭಟನೆಗೆ ಪೂರ್ವಾನುಮತಿ ಪಡೆದಿಲ್ಲ ಎಂಬುದು ದೆಹಲಿ ಪೊಲೀಸರ ವಾದವಾಗಿತ್ತು. ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಮುಂಚಿತವಾಗಿ ಅನುಮತಿ ಪಡೆಯಬೇಕು ಎಂದು ಪೊಲೀಸರು ತಿಳಿಸಿದ್ದಾರೆ.


Click the Play button to hear this message in audio format

ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ವಿರುದ್ಧ ಪ್ರತಿಭಟನೆ ನಡೆಸಲು ತೆರಳಿದ್ದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಸೇರಿದಂತೆ INDIA ಒಕ್ಕೂಟದ ಹಲವು ಸಂಸದರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬುಧವಾರ ಮಧ್ಯಾಹ್ನ ದೆಹಲಿಯ ಜನಪಥ್‌ನಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ INDIA ಒಕ್ಕೂಟದ ನಾಯಕರು ಸಭೆ ನಡೆಸಿದರು. ಸಭೆ ಬಳಿಕ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ವಿರೋಧ ಪಕ್ಷಗಳ ಸಂಸದರು ಜಂತರ್‌ ಮಂತರ್‌ನತ್ತ ಪ್ರತಿಭಟನೆಗಾಗಿ ತೆರಳಿದರು. ಆದರೆ ಜಂತರ್‌ ಮಂತರ್‌ ತಲುಪುವ ಮುನ್ನವೇ ಪೊಲೀಸರು ಅವರನ್ನು ತಡೆದರು.

ಪ್ರತಿಭಟನೆಗೆ ಪೂರ್ವಾನುಮತಿ ಪಡೆದಿಲ್ಲ ಎಂಬುದು ದೆಹಲಿ ಪೊಲೀಸರ ವಾದವಾಗಿತ್ತು. ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಮುಂಚಿತವಾಗಿ ಅನುಮತಿ ಪಡೆಯಬೇಕು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ನಾಯಕರನ್ನು ಬಸ್‌ಗಳಲ್ಲಿ ಕರೆದೊಯ್ಯಲು ಮುಂದಾದಾಗ, ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಸೇರಿದಂತೆ ಕೆಲ ನಾಯಕರು ರಸ್ತೆಯಲ್ಲೇ ಕುಳಿತು ಪ್ರತಿಭಟನೆ ಮುಂದುವರಿಸಿದರು.

ಈ ವೇಳೆ ಪ್ರಿಯಾಂಕಾ ಗಾಂಧಿ ಅಸ್ವಸ್ಥಗೊಂಡವರಂತೆ ಕಂಡು ಬಂದರು. ಕೊನೆಗೆ ಅವರು ರಸ್ತೆಯಲ್ಲೇ ಮಲಗಿದರು. ಅಲ್ಲದೇ ಅವರು ಸ್ಥಳದಿಂದ ತೆರಳಲು ನಿರಾಕರಿಸಿದರು. ಬಳಿಕ ಪೊಲೀಸರು ಅವರನ್ನು ಸ್ಥಳದಿಂದ ಕರೆದೊಯ್ದು ವಶಕ್ಕೆ ಪಡೆದರು. ರಾಹುಲ್‌ ಗಾಂಧಿ ಸೇರಿದಂತೆ ಹಲವು ಸಂಸದರನ್ನೂ ಪೊಲೀಸರು ವಶಕ್ಕೆ ಪಡೆದರು. ಮತ್ತೊಂದೆಡೆ ಜಂತರ್‌ ಮಂತರ್‌ ಕಡೆಗೆ ತೆರಳುತ್ತಿದ್ದ ವೇಳೆ ಪೊಲೀಸರೊಂದಿಗೆ ಉಂಟಾದ ತಳ್ಳಾಟದಲ್ಲಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಬಳಿಕ ಬಂಧಿತರನ್ನು ಬಿಡುಗಡೆ ಮಾಡಲಾಗಿದೆ.

Read More
Next Story