Congress supports TVK: Condition not to join hands with communal forces
x

ಟಿವಿಕೆ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು

ಟಿವಿಕೆಗೆ ಕಾಂಗ್ರೆಸ್ ಬೆಂಬಲ: "ಕೋಮುವಾದಿ ಶಕ್ತಿಗಳ" ಜೊತೆ ಕೈಜೋಡಿಸದಂತೆ ಷರತ್ತು

ತಮಿಳುನಾಡು ಕಾಂಗ್ರೆಸ್ ಸಮಿತಿ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷ ಜಂಟಿಯಾಗಿ ಟಿವಿಕೆಗೆ ಬೆಂಬಲ ನೀಡಲು ನಿರ್ಧರಿಸಿವೆ ಎಂದು ಎಐಸಿಸಿ (AICC) ಉಸ್ತುವಾರಿ ಗಿರೀಶ್ ಚೋಡಂಕರ್ ಸ್ಪಷ್ಟಪಡಿಸಿದ್ದಾರೆ.


Click the Play button to hear this message in audio format

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಎಂಟ್ರಿ ಕೊಟ್ಟಿರುವ ನಟ, ರಾಜಕಾರಣಿ ದಳಪತಿ ವಿಜಯ್ ಅವರ ತಮಿಳ್​​ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಸರ್ಕಾರ ರಚಿಸಲು ಕಾಂಗ್ರೆಸ್ ತನ್ನ ಸಂಪೂರ್ಣ ಬೆಂಬಲವನ್ನು ಘೋಷಿಸಿದೆ. ಆದರೆ, ಈ ಬೆಂಬಲಕ್ಕೆ "ಯಾವುದೇ ಕೋಮುವಾದಿ ಶಕ್ತಿಗಳನ್ನು ಮೈತ್ರಿಯಿಂದ ದೂರವಿಡಬೇಕು" ಎಂಬ ಕಟ್ಟುನಿಟ್ಟಾದ ಷರತ್ತನ್ನು ವಿಧಿಸಿದೆ.

ತಮಿಳುನಾಡು ಕಾಂಗ್ರೆಸ್ ಸಮಿತಿ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷ ಜಂಟಿಯಾಗಿ ಟಿವಿಕೆಗೆ ಬೆಂಬಲ ನೀಡಲು ನಿರ್ಧರಿಸಿವೆ ಎಂದು ಎಐಸಿಸಿ (AICC) ಉಸ್ತುವಾರಿ ಗಿರೀಶ್ ಚೋಡಂಕರ್ ಸ್ಪಷ್ಟಪಡಿಸಿದ್ದಾರೆ. "ಭಾರತದ ಸಂವಿಧಾನವನ್ನು ನಂಬದ ಯಾವುದೇ ಕೋಮುವಾದಿ ಶಕ್ತಿಗಳನ್ನು ಈ ಮೈತ್ರಿಯಿಂದ ಹೊರಗಿಡುವ ಷರತ್ತಿನ ಮೇಲೆ ನಮ್ಮ ಬೆಂಬಲ ಇರುತ್ತದೆ" ಎಂದು ಅವರು ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಮೂಲಕ ದಶಕಗಳ ಕಾಲದಿಂದ ತಮಿಳುನಾಡಿನಲ್ಲಿ ಹೊಂದಿದ್ದ ಡಿಎಂಕೆ ಜೊತೆಗಿನ ಮೈತ್ರಿಯನ್ನು ಕಾಂಗ್ರೆಸ್ ಕಡಿದುಕೊಂಡಿದೆ.

ಬಹುಮತಕ್ಕೆ ಇನ್ನಷ್ಟು ಶಾಸಕರ ಅಗತ್ಯ

ಚುನಾವಣೆಯಲ್ಲಿ ಟಿವಿಕೆ ಪಕ್ಷವು 234 ಕ್ಷೇತ್ರಗಳ ಪೈಕಿ 108 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಬಹುಮತಕ್ಕೆ 118 ಸ್ಥಾನಗಳ ಅಗತ್ಯವಿದ್ದು, ಕಾಂಗ್ರೆಸ್‌ನ 5 ಶಾಸಕರ ಬೆಂಬಲದೊಂದಿಗೆ ಟಿವಿಕೆ ಬಲ 113 ಕ್ಕೆ ಏರಿಕೆಯಾಗಿದೆ. ಸರ್ಕಾರ ರಚನೆಗೆ ಇನ್ನು 5 ಶಾಸಕರ ಕೊರತೆ ಇದ್ದು, ವಿಜಯ್ ಅವರು ವಿಸಿಕೆ (VCK), ಸಿಪಿಐ ಮತ್ತು ಸಿಪಿಎಂ ಪಕ್ಷಗಳ ಬೆಂಬಲ ಕೋರಿದ್ದಾರೆ. ಈ ಪಕ್ಷಗಳು ಬೆಂಬಲ ನೀಡಿದರೆ ಟಿವಿಕೆ ಬಲ 119 ಕ್ಕೆ ಏರಿಕೆಯಾಗಲಿದ್ದು, ಸರ್ಕಾರ ರಚನೆಯ ಹಾದಿ ಸುಗಮವಾಗಲಿದೆ.

ಇದೇ ವೇಳೆ, ಟಿವಿಕೆ ನಾಯಕರು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರನ್ನು ಕೂಡ ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ. ಟಿವಿಕೆ ಮತ್ತು ಕಾಂಗ್ರೆಸ್ ಮೈತ್ರಿಯು ಕೇವಲ ಸರ್ಕಾರ ರಚನೆಗೆ ಮಾತ್ರ ಸೀಮಿತವಾಗಿರದೆ, ಮುಂದಿನ ಸ್ಥಳೀಯ ಸಂಸ್ಥೆಗಳು, ಲೋಕಸಭೆ ಹಾಗೂ ರಾಜ್ಯಸಭಾ ಚುನಾವಣೆಗಳಿಗೂ ವಿಸ್ತರಿಸಲಿದೆ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.

Read More
Next Story