ತಿರುಚಿ-ಚೆನ್ನೈ ಹೆದ್ದಾರಿಯಲ್ಲಿ ಭೀಕರ ಅಪಘಾತ; ಮೂವರು ಸಾವು
x

ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ನಾಲ್ವರು ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ತಿರುಚಿ-ಚೆನ್ನೈ ಹೆದ್ದಾರಿಯಲ್ಲಿ ಭೀಕರ ಅಪಘಾತ; ಮೂವರು ಸಾವು

ಪೆರಂಬಲೂರು ಸಮೀಪದ ತಿರುಚಿ-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ತೀವ್ರವಾಗಿ ಹಾನಿಗೊಳಗಾಗಿದೆ.


Click the Play button to hear this message in audio format

ತಮಿಳುನಾಡಿನ ಪೆರಂಬಲೂರು ಸಮೀಪದ ತಿರುಚಿ-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದೇ ಘಟನೆಯಲ್ಲಿ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಈ ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತದ ತೀವ್ರತೆಗೆ ಸ್ಥಳದಲ್ಲಿ ಕೆಲಕಾಲ ಭೀತಿ ಹಾಗೂ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ವಿಷಯ ತಿಳಿದ ತಕ್ಷಣವೇ ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಗಾಯಾಳುಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರು ಹಾಗೂ ಗಾಯಗೊಂಡವರ ಗುರುತಿನ ಪತ್ತೆಗೆ ಪೊಲೀಸರು ಮುಂದಾಗಿದ್ದು, ಘಟನೆಗೆ ನಿಖರ ಕಾರಣ ಏನೆಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.

ಈ ಅಪಘಾತದಿಂದಾಗಿ ತಿರುಚಿ-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಸಂಚಾರ ಪೊಲೀಸರು ರಸ್ತೆಯಲ್ಲಿದ್ದ ವಾಹನ ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಸ್ಥಳೀಯ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Read More
Next Story