ನಟಿ ತ್ರಿಷಾ ಕುರಿತು ವಿವಾದಾತ್ಮಕ ಹೇಳಿಕೆ: ಉದಯನಿಧಿ ಸ್ಟಾಲಿನ್ ಅರೆಸ್ಟ್‌
x

ನಟಿ ತ್ರಿಷಾ ಕುರಿತು ವಿವಾದಾತ್ಮಕ ಹೇಳಿಕೆ: ಉದಯನಿಧಿ ಸ್ಟಾಲಿನ್ ಅರೆಸ್ಟ್‌

ಸೋಮವಾರ ತಂಜಾವೂರಿನಲ್ಲಿ ನಡೆದ ಸಮಾವೇಶವೊಂದರಲ್ಲಿ ಕಾವೇರಿ ವಿಚಾರವಾಗಿ ಮಾತನಾಡುತ್ತಿದ್ದಾಗ, ಉದಯನಿಧಿ ಸ್ಟಾಲಿನ್ ಅವರು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಹಾಗೂ ನಟಿ ತ್ರಿಷಾ ಅವರ ಹೆಸರನ್ನು ಪ್ರಸ್ತಾಪಿಸಿ ದ್ವಂದ್ವಾರ್ಥ ಕಾಮೆಂಟ್ ಮಾಡಿದ್ದರು.


ನಟಿ ತ್ರಿಷಾ ಅವರ ವಿರುದ್ಧ ಸಮಾವೇಶವೊಂದರಲ್ಲಿ ಆಶ್ಲೀಲ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಮಂಗಳವಾರ ಮುಂಜಾನೆ ತಮಿಳುನಾಡು ಪೊಲೀಸರು ಅವರ ನಿವಾಸದಲ್ಲೇ ಬಂಧಿಸಿದ್ದಾರೆ. ಈ ಹಠಾತ್ ಬೆಳವಣಿಗೆಯಿಂದಾಗಿ ಚೆನ್ನೈನಲ್ಲಿ ತೀವ್ರ ಹೈಡ್ರಾಮಾ ಮತ್ತು ರಾಜಕೀಯ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಹೈಡ್ರಾಮಾಗೆ ಕಾರಣವಾದ ಬಂಧನ

ಸೋಮವಾರ ತಂಜಾವೂರಿನಲ್ಲಿ ನಡೆದ ಸಮಾವೇಶವೊಂದರಲ್ಲಿ ಕಾವೇರಿ ವಿಚಾರವಾಗಿ ಮಾತನಾಡುತ್ತಿದ್ದಾಗ, ಉದಯನಿಧಿ ಸ್ಟಾಲಿನ್ ಅವರು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಹಾಗೂ ನಟಿ ತ್ರಿಷಾ ಅವರ ಹೆಸರನ್ನು ಪ್ರಸ್ತಾಪಿಸಿ ದ್ವಂದ್ವಾರ್ಥ ಕಾಮೆಂಟ್ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (TVK) ಉದಯನಿಧಿ ಅವರ ಮಾತುಗಳನ್ನು "ಅಸಹ್ಯಕರ ಹಾಗೂ ನೀಚ ಮನಸ್ಥಿತಿ" ಎಂದು ಕರೆದು ಖಂಡಿಸಿತ್ತು. ಅಲ್ಲದೆ, ಪ್ರತಿಪಕ್ಷ ಬಿಜೆಪಿ ಉದಯನಿಧಿ ಅವರನ್ನು ತಕ್ಷಣ ಬಂಧಿಸಿ ಜೈಲಿಗಟ್ಟಬೇಕೆಂದು ಆಗ್ರಹಿಸಿತ್ತು.

ಈ ಸಾಲು ಸಾಲು ಪ್ರತಿಭಟನೆಗಳು ಹಾಗೂ ಆಕ್ರೋಶದ ಬೆನ್ನಲ್ಲೇ, ಮಂಗಳವಾರ ಮುಂಜಾನೆ ಉದಯನಿಧಿ ಅವರ ಚೆನ್ನೈ ನಿವಾಸಕ್ಕೆ ಮುತ್ತಿಗೆ ಹಾಕಿದ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಂಧನದಿಂದಾಗಿ ತಮಿಳುನಾಡು ರಾಜಕೀಯದಲ್ಲಿ ಆಡಳಿತಾರೂಢ ಟಿವಿಕೆ ಮತ್ತು ಡಿಎಂಕೆ ಬೆಂಬಲಿಗರ ನಡುವೆ ಸಂಘರ್ಷ ತೀವ್ರಗೊಳ್ಳುವ ಲಕ್ಷಣಗಳು ಕಂಡುಬರುತ್ತಿವೆ.

Read More
Next Story