
ವಿದ್ಯಾರ್ಥಿಗಳ ಪ್ರತಿಭಟನೆ ತಡೆಯುವ ಸೂಚನೆ ಹಿಂಪಡೆದ ತಮಿಳುನಾಡು ಸರ್ಕಾರ
ವಿದ್ಯಾರ್ಥಿಗಳ ಸಿಜೆಪಿ ಸೇರ್ಪಡೆ, ರಾಜಕೀಯ ಪ್ರತಿಭಟನೆಗಳಲ್ಲಿ ಭಾಗಿ ತಡೆಗೆ ಹೊರಡಿಸಿದ್ದ ಆದೇಶವನ್ನು ಹಿಂಪಡೆದ ವಿಜಯ್
ಎಡಪಕ್ಷಗಳು ಮತ್ತು ತಮಿಳುನಾಡು ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸುವ ಕಾರ್ಯಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ತಮಿಳುನಾಡು ಸರ್ಕಾರ ಅದರಲ್ಲಿ ವಿದ್ಯಾರ್ಥಿಗಳ ಭಾಗಿಯನ್ನು ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ನಿರ್ಧಾರಕ್ಕೆ ಬಂದಿತ್ತು.
ವಿದ್ಯಾರ್ಥಿಗಳು ಹಾಗೂ ಯುವಕರು ಸಿಜೆಪಿ ಸೇರಿದಂತೆ ಯಾವುದೇ ರಾಜಕೀಯ ಪಕ್ಷಗಳ ಪ್ರತಿಭಟನೆ ಮತ್ತು ಆಂದೋಲನಗಳಲ್ಲಿ ಭಾಗವಹಿಸುವುದನ್ನು ತಡೆಯಲು ಹೊರಡಿಸಿದ್ದ ಆದೇಶವನ್ನು ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಸರ್ಕಾರ ಕೆಲವೇ ಗಂಟೆಗಳಲ್ಲಿ ಹಿಂಪಡೆದಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಕರು ರಾಜಕೀಯ ಪ್ರತಿಭಟನೆಗಳಲ್ಲಿ ಭಾಗವಹಿಸದಂತೆ ಕ್ರಮ ಕೈಗೊಳ್ಳುವಂತೆ ಈ ಹಿಂದೆ ವಿಜಯ್ ಸರ್ಕಾರ ಸೂಚಿಸಲಾಗಿತ್ತು.
ಈ ಹಿಂದೆ ಹೊರಡಿಸಿದ್ದ ಆದೇಶದಲ್ಲೇನಿತ್ತು?
ಕಾಲೇಜು ಶಿಕ್ಷಣ ಇಲಾಖೆಯ ಅಧಿಕೃತ ಮಾಹಿತಿ ಪ್ರಕಾರ, ಎಡಪಕ್ಷಗಳು ಮತ್ತು ತಮಿಳುನಾಡು ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸುವ ಕಾರ್ಯಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮಗಳನ್ನು ಸೂಚಿಸಲಾಗಿತ್ತು. ವಿದ್ಯಾರ್ಥಿಗಳು ಮತ್ತು ಯುವಕರು ಇಂತಹ ರಾಜಕೀಯ ಪ್ರತಿಭಟನೆ ಹಾಗೂ ಆಂದೋಲನ ಕಾರ್ಯಕ್ರಮಗಳಲ್ಲಿ ಭಾಗವಹಿಸದಂತೆ ತಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿತ್ತು.
ಕಾಲೇಜು ಶಿಕ್ಷಣ ನಿರ್ದೇಶನಾಲಯವು ಈ ಸಂಬಂಧ ಇಲಾಖೆಗಳು ಮತ್ತು ಜಿಲ್ಲಾಡಳಿತಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸೂಚಿಸಿತ್ತು. ಅಲ್ಲದೆ, ಕೈಗೊಂಡ ಕ್ರಮಗಳ ಕುರಿತು ವರದಿಯನ್ನು ಸಲ್ಲಿಸುವಂತೆಯೂ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿತ್ತು.
ರಾಜಕೀಯ ಪಕ್ಷಗಳು ಆಯೋಜಿಸುವ ಪ್ರತಿಭಟನೆಗಳಲ್ಲಿ ವಿದ್ಯಾರ್ಥಿಗಳು ಮತ್ತು ಯುವಕರು ಭಾಗವಹಿಸುವುದನ್ನು ತಡೆಯುವ ಉದ್ದೇಶದಿಂದ ಹೊರಡಿಸಲಾಗಿದ್ದ ಈ ನಿರ್ದೇಶನ ಇದೀಗ ಹಿಂಪಡೆಯಲಾಗಿದೆ. ಸರ್ಕಾರದ ಈ ನಿರ್ಧಾರವು ತಮಿಳುನಾಡಿನ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

