x

ಪಾಕ್‌ನಲ್ಲಿ ಕುಳಿತು ಉಗ್ರರ ಸಂಚು.. 30 ಮಂದಿ ನಾಪತ್ತೆ ಕೇಸ್‌ಗೆ ಟ್ವಿಸ್ಟ್

ರಿಯಾಸಿ ಜಿಲ್ಲೆಯಲ್ಲಿರುವ ತಮ್ಮ ಪೂರ್ವಜರ ಜಮೀನುಗಳನ್ನು ಮಾರಾಟ ಮಾಡಿ ಉಗ್ರ ಚಟುವಟಿಕೆಗಳಿಗೆ ಹಣ ಹೊಂದಿಸುವ ಸಂಚು ಕೂಡ ಬಯಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಯುಎಪಿಎ ಕಾಯ್ದೆಯಡಿ ಐವರು ಪ್ರಮುಖ ಉಗ್ರರಿಗೆ ಸೇರಿದ ಜಮೀನುಗಳನ್ನು ಜಪ್ತಿ ಮಾಡಿದ್ದಾರೆ.


Click the Play button to hear this message in audio format

ಜಮ್ಮುವಿನಿಂದ ವರ್ಷಗಳ ಹಿಂದೆ ನಾಪತ್ತೆಯಾಗಿದ್ದ 30 ಮಂದಿ ಪಾಕಿಸ್ತಾನಕ್ಕೆ ತೆರಳಿ ಉಗ್ರ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್ ಸೇರಿಕೊಂಡಿದ್ದಾರೆ ಎಂಬ ಆತಂಕಕಾರಿ ಮಾಹಿತಿ ಬಹಿರಂಗವಾಗಿದೆ. ಅಲ್ಲಿಂದಲೇ ಉಗ್ರ ಚಟುವಟಿಕೆ ನಡೆಸುವುದರ ಜೊತೆಗೆ ಯುವಕರನ್ನು ಪ್ರಚೋದಿಸುತ್ತಿದ್ದಾರೆ ಎನ್ನಲಾಗಿದೆ. ರಿಯಾಸಿ ಜಿಲ್ಲೆಯಲ್ಲಿರುವ ತಮ್ಮ ಪೂರ್ವಜರ ಜಮೀನುಗಳನ್ನು ಮಾರಾಟ ಮಾಡಿ ಉಗ್ರ ಚಟುವಟಿಕೆಗಳಿಗೆ ಹಣ ಹೊಂದಿಸುವ ಸಂಚು ಕೂಡ ಬಯಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಯುಎಪಿಎ ಕಾಯ್ದೆಯಡಿ ಐವರು ಪ್ರಮುಖ ಉಗ್ರರಿಗೆ ಸೇರಿದ ಜಮೀನುಗಳನ್ನು ಜಪ್ತಿ ಮಾಡಿದ್ದಾರೆ. ಉಗ್ರರ ಆಸ್ತಿ ಮಾರಾಟಕ್ಕೆ ಸಹಕರಿಸುವವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಈ ಬೆಳವಣಿಗೆ ಭದ್ರತಾ ಸಂಸ್ಥೆಗಳ ಗಮನ ಸೆಳೆದಿದೆ.

Read More
Next Story