ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟಿನಲ್ಲಿ ದುರಂತ; ಬಿಸಿ ಕಬ್ಬಿಣದ ದ್ರವ ಬಿದ್ದು ಎಂಟು ಮಂದಿ ಸಾವು
x

ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟಿನಲ್ಲಿ ದುರಂತ; ಬಿಸಿ ಕಬ್ಬಿಣದ ದ್ರವ ಬಿದ್ದು ಎಂಟು ಮಂದಿ ಸಾವು

ಕ್ರೇನ್ ಮೂಲಕ ಸಾಗಿಸುತ್ತಿದ್ದ ಬಕೆಟ್‌ನಿಂದ ಕುದಿಯುತ್ತಿದ್ದ ಬಿಸಿಯಾದ ಕರಗಿದ ಉಕ್ಕು ಇದ್ದಕ್ಕಿದ್ದಂತೆ ಕಾರ್ಮಿಕರ ಮೇಲೆ ಬಿದ್ದು ಈ ದುರಂತ ಸಂಭವಿಸಿದೆ.


ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಸ್ಟೀಲ್ ಪ್ಲಾಂಟ್ ನಲ್ಲಿ ಸೋಮವಾರ ದುರಂತ ಸಂಭವಿಸಿದ್ದು ಕನಿಷ್ಠ 8 ಕಾರ್ಮಿಕರು ಮೃತಪಟ್ಟಿದ್ದಾರೆ. ದುರಂತದಲ್ಲಿ ಹಲವು ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದಾರೆ.

ಕ್ರೇನ್ ಮೂಲಕ ಸಾಗಿಸುತ್ತಿದ್ದ ಬಕೆಟ್‌ನಿಂದ ಕುದಿಯುತ್ತಿದ್ದ ಬಿಸಿಯಾದ ಕರಗಿದ ಉಕ್ಕು ಇದ್ದಕ್ಕಿದ್ದಂತೆ ಕಾರ್ಮಿಕರ ಮೇಲೆ ಬಿದ್ದು ಈ ದುರಂತ ಸಂಭವಿಸಿದೆ.

ಅಪಘಾತದ ಸಮಯದಲ್ಲಿ ಕರಗಿದ ಉಕ್ಕು ಸುಮಾರು 1,600°C ಗರಿಷ್ಠ ತಾಪಮಾನದಲ್ಲಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಘಟನೆಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದು, ರಕ್ಷಣಾ ಕಾರ್ಯಾಚರಣೆ ತ್ವರಿತಗೊಳಿಸಲು ಸಂಬಂಧಿತ ಇಲಾಖೆಗಳಿಗೆ ನಿರ್ದೇಶನ ನೀಡಿದ್ದಾರೆ. ಸ್ಥಾವರ ಆವರಣದಲ್ಲಿ ಆತಂಕ ಮನೆ ಮಾಡಿತ್ತು.

ಕಾರ್ಮಿಕರು ತಮ್ಮ ಜೀವ ಉಳಿಸಿಕೊಳ್ಳಲು ಅಲ್ಲಿಂದ ಓಡಿ ಹೋದರು. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ಉಕ್ಕು ಸ್ಥಾವರ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಿಸಲು ಹರಸಾಹಸ ಪಟ್ಟರು.

ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್ ಸರ್ಕಲ್ ಇನ್ಸ್‌ಪೆಕ್ಟರ್ ಕೇಶವ್ ರಾವ್ ಪ್ರಕಾರ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ನಿರಂತರ ಪ್ರಯತ್ನ ನಡೆಯುತ್ತಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಾಥಮಿಕ ಮಾಹಿತಿ ಇನ್ನೂ ಸ್ಪಷ್ಟವಾಗಿಲ್ಲ, ಆದರೆ ಈ ಘಟನೆಯು ಮತ್ತೊಮ್ಮೆ ಭಾರೀ ಕೈಗಾರಿಕೆಗಳು ಮತ್ತು ಉಕ್ಕಿನ ಉತ್ಪಾದನಾ ಘಟಕಗಳಲ್ಲಿನ ಸುರಕ್ಷತಾ ಮಾನದಂಡಗಳ ಬಗ್ಗೆ ಗಂಭೀರ ಪ್ರಶ್ನೆ ಹುಟ್ಟುಹಾಕಿದೆ.

ದುರಂತಕ್ಕೆ‌ ಸಂಬಂಧಿಸಿದಂತೆ ತೀವ್ರ ಆಘಾತ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಇಂದು ವಿಶಾಖಪಟ್ಟಣಂ ಉಕ್ಕಿನ ಸ್ಥಾವರದಲ್ಲಿ ಸಂಭವಿಸಿದ ದುರಂತ ಅಪಘಾತವು ಅಮೂಲ್ಯ ಜೀವಗಳನ್ನು ಬಲಿ ಪಡೆದು ಹಲವಾರು ಕಾರ್ಮಿಕರನ್ನು ಗಾಯಗೊಳಿಸಿದ್ದು, ತೀವ್ರ ದುಃಖಕ್ಕೆ ಕಾರಣವಾಗಿದೆ.

ನಾನು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ ಮತ್ತು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಘಟನೆಗೆ ಕಾರಣವಾದ ಸಂದರ್ಭಗಳನ್ನು ನಿರ್ಣಯಿಸಲಾಗುತ್ತಿದೆ.‌ ಗಾಯಾಳುಗಳು ಹಾಗೂ ಸಂತ್ರಸ್ತರ ಕುಟುಂಬಗಳಿಗೆ ಅಗತ್ಯವಿರುವ ಎಲ್ಲಾ ಸಹಾಯವನ್ನು ನೀಡಲಾಗುತ್ತಿದೆ ಎಂದು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ನಮ್ಮ ಕಾರ್ಮಿಕರ ಸುರಕ್ಷತೆ ಮತ್ತು ಯೋಗಕ್ಷೇಮ ನಮ್ಮ ಅತ್ಯುನ್ನತ ಆದ್ಯತೆಯಾಗಿದೆ ಎಂದು ಅವರು ಹೇಳಿದ್ದಾರೆ.

Read More
Next Story