23 ಕಾಶ್ಮೀರಿ ಪಂಡಿತರ ಹತ್ಯೆ ಪ್ರಕರಣದ ಮರು ತನಿಖೆ ಆರಂಭ
x

23 ಕಾಶ್ಮೀರಿ ಪಂಡಿತರ ಹತ್ಯೆ ಪ್ರಕರಣದ ಮರು ತನಿಖೆ ಆರಂಭ

1998ರಲ್ಲಿ ನಡೆದ ವಂಧಾಮಾ ಹತ್ಯಾಕಾಂಡದಲ್ಲಿ 23 ಮಂದಿ ಕಾಶ್ಮೀರಿ ಪಂಡಿತರು ಹತ್ಯೆಯಾಗಿದ್ದರು. ಈ ಪ್ರಕರಣದಲ್ಲಿ ಭಾಗಿಯಾಗಿದ್ದರೆನ್ನಲಾದ ಉಗ್ರರು ಹಾಗೂ ಅವರಿಗೆ ಸಹಾಯ ಮಾಡಿದ ಓವರ್‌ಗ್ರೌಂಡ್ ವರ್ಕರ್‌ಗಳನ್ನು (OGW) ಗುರುತಿಸುವ ನಿಟ್ಟಿನಲ್ಲಿ ತನಿಖೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.


Click the Play button to hear this message in audio format

ಜಮ್ಮು ಮತ್ತು ಕಾಶ್ಮೀರದ ರಾಜ್ಯ ತನಿಖಾ ಸಂಸ್ಥೆ (SIA) 1998ರ ವಂಧಾಮಾ ಹತ್ಯಾಕಾಂಡ ಪ್ರಕರಣದ ತನಿಖೆಯನ್ನು ಮತ್ತೆ ಆರಂಭಿಸಿದೆ. ಕಾಶ್ಮೀರ ಕಣಿವೆಯಲ್ಲಿ ಉಗ್ರಗಾಮಿ ಚಟುವಟಿಕೆಗಳು ತೀವ್ರವಾಗಿದ್ದ ಸಂದರ್ಭದಲ್ಲಿ ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿಕೊಂಡು ನಡೆದ ಹತ್ಯೆಗಳಳಿಗೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ಬಾಕಿ ಉಳಿದಿರುವ ಪ್ರಕರಣಗಳನ್ನು ಮರುಪರಿಶೀಲಿಸುವ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ.

1998ರಲ್ಲಿ ನಡೆದ ವಂಧಾಮಾ ಹತ್ಯಾಕಾಂಡದಲ್ಲಿ 23 ಮಂದಿ ಕಾಶ್ಮೀರಿ ಪಂಡಿತರು ಹತ್ಯೆಯಾಗಿದ್ದರು. ಈ ಪ್ರಕರಣದ ತನಿಖೆಯನ್ನು ಮತ್ತೆ ಚುರುಕುಗೊಳಿಸಿರುವ SIA, ದಾಳಿಯಲ್ಲಿ ಭಾಗಿಯಾಗಿದ್ದರೆನ್ನಲಾದ ಉಗ್ರರು ಹಾಗೂ ಅವರಿಗೆ ಸಹಾಯ ಮಾಡಿದ ಓವರ್‌ಗ್ರೌಂಡ್ ವರ್ಕರ್‌ಗಳನ್ನು (OGW) ಗುರುತಿಸುವ ನಿಟ್ಟಿನಲ್ಲಿ ತನಿಖೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಇದೇ ವೇಳೆ ಪ್ರಮುಖ ಕಾಶ್ಮೀರಿ ಪಂಡಿತ್ ನಾಯಕ ಟಿಕಾ ಲಾಲ್ ಟಪ್ಲೂ ಅವರ ಹತ್ಯೆ ಹಾಗೂ ನ್ಯಾಯಮೂರ್ತಿ ನೀಲಕಂಠ್ ಗಂಜೂ ಅವರ ಹತ್ಯೆ ಪ್ರಕರಣಗಳ ತನಿಖೆಯನ್ನೂ SIA ಚುರುಕುಗೊಳಿಸಿದೆ ಎಂದು ಮೂಲಗಳು ತಿಳಿಸಿವೆ. ಇತ್ತೀಚೆಗಷ್ಟೇ ಕಾಶ್ಮೀರಿ ಪಂಡಿತ್ ನರ್ಸ್ ಸರಳಾ ಭಟ್ ಹಾಗೂ ಖ್ಯಾತ ಬರಹಗಾರ ಸರ್ವಾನಂದ್ ಕೌಲ್ ಪ್ರೇಮಿ ಮತ್ತು ಅವರ ಪುತ್ರ ವೀರೇಂದ್ರ ಕೌಲ್ ಹತ್ಯೆ ಪ್ರಕರಣಗಳ ಬಗ್ಗೆಯೂ SIA ಮತ್ತೆ ತನಿಖೆಗೆ ಮುಂದಾಗಿತ್ತು.

ವಂಧಾಮಾ ಹತ್ಯಾಕಾಂಡ ಹಾಗೂ ಟಿಕಾ ಲಾಲ್ ಟಪ್ಲೂ ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ SIA ಅಧಿಕಾರಿಗಳು ಕೆಲವು ದಿನಗಳ ಹಿಂದೆ ಕಾಶ್ಮೀರ ಕಣಿವೆಯ ಹಲವು ಸ್ಥಳಗಳಲ್ಲಿ ದಾಳಿ ಹಾಗೂ ಶೋಧ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Read More
Next Story