ಜುಲೈ 20ಕ್ಕೆ ಪಾರ್ಲಿಮೆಂಟ್ ಚಲೋಗೆ ವಾಂಗ್‌ಚುಕ್ ಕರೆ
x

ನೀಟ್ ಅಕ್ರಮ ಖಂಡಿಸಿ ಜುಲೈ 20ರ ಪಾರ್ಲಿಮೆಂಟ್ ಚಲೋಗೆ ಸೋನಮ್ ವಾಂಗ್‌ಚುಕ್ ಕರೆ ನೀಡಿದ್ದಾರೆ. 

ಜುಲೈ 20ಕ್ಕೆ ಪಾರ್ಲಿಮೆಂಟ್ ಚಲೋಗೆ ವಾಂಗ್‌ಚುಕ್ ಕರೆ

ನೀಟ್ ಅಕ್ರಮ ಖಂಡಿಸಿ ಜುಲೈ 20ರ ಪಾರ್ಲಿಮೆಂಟ್ ಚಲೋಗೆ ಸೋನಮ್ ವಾಂಗ್‌ಚುಕ್ ಕರೆ ನೀಡಿದ್ದು, ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ತಮ್ಮನ್ನು ಅಕ್ರಮವಾಗಿ ಬಂಧಿಸಲಾಗಿದೆ ಎಂದು ಆರೋಪಿಸಿದ್ದಾರೆ.


Click the Play button to hear this message in audio format

ನೀಟ್ ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಯ ಭಾಗವಾಗಿ ಜುಲೈ 20 ರಂದು ಹಮ್ಮಿಕೊಳ್ಳಲಾಗಿರುವ ಪಾರ್ಲಿಮೆಂಟ್ ಚಲೋ ಹಕ್ಕೊತ್ತಾಯವನ್ನು ಹವಾಮಾನ ಹೋರಾಟಗಾರ ಹಾಗೂ ಶಿಕ್ಷಣ ತಜ್ಞ ಸೋನಮ್ ವಾಂಗ್‌ಚುಕ್ ಅವರು 'ಭಾರತದ ಎರಡನೇ ಸ್ವಾತಂತ್ರ್ಯ ಚಳವಳಿ' ಎಂದು ಬಣ್ಣಿಸಿದ್ದಾರೆ.

ಕಳೆದ 21 ದಿನಗಳಿಂದ ನಿರಂತರ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸರು ಜಂತರ್ ಮಂತರ್‌ನಿಂದ ಬಲವಂತವಾಗಿ ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಿದ್ದು, ತಾವು ಅಲ್ಲಿ ಅಕ್ರಮ ಬಂಧನದಲ್ಲಿದ್ದೇನೆ ಎಂದು ಅವರು ಆರೋಪಿಸಿದ್ದಾರೆ. ಆಸ್ಪತ್ರೆಯಿಂದಲೇ ತಮ್ಮ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಅವರ ಮೂಲಕ ಲಿಖಿತ ಸಂದೇಶ ರವಾನಿಸಿರುವ ಅವರು, ನೀಟ್‌ನಂತಹ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯ ವಿರುದ್ಧ 'ಅನ್ಯಾಯದಿಂದ ಮುಕ್ತಿ' ಹಾಗೂ ತಮ್ಮನ್ನು ಅಕ್ರಮವಾಗಿ ಬಂಧಿಸಿರುವುದರ ವಿರುದ್ಧ 'ಭಯದಿಂದ ಮುಕ್ತಿ' ಪಡೆಯಲು ಈ ಸಂಸತ್ ಮಾರ್ಚ್ ಅನ್ನು ಅತ್ಯಂತ ಯಶಸ್ವಿಗೊಳಿಸಬೇಕೆಂದು ದೇಶದ ಜನತೆಗೆ ಮತ್ತು ಬೆಂಬಲಿಗರಿಗೆ ಕರೆ ನೀಡಿದ್ದಾರೆ.

ಇದೇ ವೇಳೆ, ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಸ್ಥಿತಿ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದ್ದು, ಸರ್ಕಾರಿ ಆಸ್ಪತ್ರೆಯ ಚಿಕಿತ್ಸೆಯ ಮೇಲೆ ನಂಬಿಕೆ ಕಳೆದುಕೊಂಡಿರುವುದಾಗಿ ಅವರ ಪತ್ನಿ ಗೀತಾಂಜಲಿ ತಿಳಿಸಿದ್ದಾರೆ. ವಾಂಗ್‌ಚುಕ್ ಅವರ ದೇಹದಲ್ಲಿ ಪೊಟ್ಯಾಸಿಯಮ್ ಮಟ್ಟ ತೀವ್ರವಾಗಿ ಕುಸಿದಿದ್ದರೂ ಆಸ್ಪತ್ರೆಯು ಹೆಲ್ತ್ ಬುಲೆಟಿನ್‌ನಲ್ಲಿ ನೈಜ ಅಂಕಿ-ಅಂಶಗಳನ್ನು ಮರೆಮಾಚಿದೆ ಎಂದು ಆಕ್ರೋಶ ಹೊರಹಾಕಿರುವ ಅವರು, ತಮ್ಮ ಪತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲು ಅನುಮತಿ ಕೋರಿ ದೆಹಲಿ ಹೈಕೋರ್ಟ್‌ನಲ್ಲಿ ತುರ್ತು ಅರ್ಜಿಯೊಂದನ್ನು ಸಲ್ಲಿಸಿದ್ದಾರೆ. ಆಸ್ಪತ್ರೆಯ ಆವರಣದಲ್ಲಿ ನೂರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಿ ತಮ್ಮ ಚಲನವಲನಗಳನ್ನು ನಿರ್ಬಂಧಿಸಲಾಗಿದ್ದು, ಇದು ವೈದ್ಯಕೀಯ ಆರೈಕೆಯಲ್ಲ, ಬದಲಿಗೆ ಕಾನೂನುಬಾಹಿರ ಬಂಧನವಾಗಿದೆ ಎಂದು ಅವರು ದೂರಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ಸರಿಪಡಿಸಲು ಮತ್ತು ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಒತ್ತಾಯಿಸಿ ಸಿಜೆಪಿ ನೇತೃತ್ವದಲ್ಲಿ ಈ ಬೃಹತ್ ಸಂಸತ್ ಚಲೋ ಹಮ್ಮಿಕೊಳ್ಳಲಾಗಿದೆ.

Read More
Next Story