ಹಾರ್ದಿಕ್ ಪಾಂಡ್ಯ ಪಾಲಿಗೆ ಲೇಡಿ ಲಕ್ ಆದರಾ ಮಾಹಿಕಾ; ಪೋಟೋ ವೈರಲ್‌
x

ವಿಶ್ವಕಪ್ ಗೆಲುವಿನ ಸಂಭ್ರಮದ ನಡುವೆ ಹಾರ್ದಿಕ್ ಪಾಂಡ್ಯ ಅವರ ವೈಯಕ್ತಿಕ ಜೀವನ ಮತ್ತೆ ಸುದ್ದಿಯಲ್ಲಿದೆ.

ಹಾರ್ದಿಕ್ ಪಾಂಡ್ಯ ಪಾಲಿಗೆ ಲೇಡಿ ಲಕ್ ಆದರಾ ಮಾಹಿಕಾ; ಪೋಟೋ ವೈರಲ್‌

ಪಂದ್ಯದ ನಂತರದ ಸಂಭ್ರಮಾಚರಣೆಯಲ್ಲಿ ತಂಡದ ಆಟಗಾರರೊಂದಿಗೆ ಕಾಣಿಸಿಕೊಂಡ ಮಾಹಿಕಾ ಶರ್ಮಾ, ಹಾರ್ದಿಕ್ ಪಾಂಡ್ಯ ಅವರಿಗೆ ವಿಶೇಷವಾಗಿ ಶುಭ ಹಾರೈಸಿದರು.


Click the Play button to hear this message in audio format

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 2026ರ ಐಸಿಸಿ ಪುರುಷರ ಟಿ20 ವಿಶ್ವಕಪ್‌ನ ರೋಚಕ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿದ ಭಾರತ, ಐತಿಹಾಸಿಕ ಜಯಭೇರಿ ಬಾರಿಸಿದೆ. ಈ ಗೆಲುವಿನ ಸಂಭ್ರಮದ ನಡುವೆ ಭಾರತೀಯ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಮತ್ತು ಅವರ ಗೆಳತಿ ಮಾಹಿಕಾ ಶರ್ಮಾ ಜೋಡಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ.

ಪಂದ್ಯದ ನಂತರದ ಸಂಭ್ರಮಾಚರಣೆಯಲ್ಲಿ ತಂಡದ ಆಟಗಾರರೊಂದಿಗೆ ಕಾಣಿಸಿಕೊಂಡ ಮಾಹಿಕಾ ಶರ್ಮಾ, ಹಾರ್ದಿಕ್ ಪಾಂಡ್ಯ ಅವರಿಗೆ ವಿಶೇಷವಾಗಿ ಶುಭ ಹಾರೈಸಿದರು. ಮೈದಾನದಲ್ಲಿ ಈ ಜೋಡಿ ಹಂಚಿಕೊಂಡ ಪ್ರೀತಿಯ ಕ್ಷಣಗಳು ಮತ್ತು ಫೋಟೋಗಳು ವೈರಲ್ ಆಗಿದ್ದು, ಅಭಿಮಾನಿಗಳು ಇವರ ಕೆಮಿಸ್ಟ್ರಿಯನ್ನು ಮೆಚ್ಚಿ ಕೊಂಡಾಡುತ್ತಿದ್ದಾರೆ. ಇದೇ ವೇಳೆ ಸಂದರ್ಶನವೊಂದರಲ್ಲಿ ಮಾತನಾಡಿದ ಹಾರ್ದಿಕ್ ಪಾಂಡ್ಯ, ತಮ್ಮ ಜೀವನದಲ್ಲಿ ಆಗುತ್ತಿರುವ ಬದಲಾವಣೆಗಳಿಗೆ ಗೆಳತಿ ಮಾಹಿಕಾ ಅವರೇ ಕಾರಣ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

"ನಾವು ಗೆಲ್ಲುತ್ತೇವೆ ಎಂದು ನನಗೆ ಮೊದಲೇ ನಂಬಿಕೆಯಿತ್ತು, ಇದನ್ನು ನಾನು ಮಾಹಿಕಾ ಅವರಿಗೂ ಹೇಳಿದ್ದೆ. ಮಾಹಿಕಾ ನನ್ನ ಜೀವನಕ್ಕೆ ಬಂದ ನಂತರ ಎಲ್ಲವೂ ಒಳ್ಳೆಯದೇ ನಡೆಯುತ್ತಿದೆ. ಒಂದಾದ ನಂತರ ಒಂದರಂತೆ ಗೆಲುವುಗಳು ಲಭಿಸುತ್ತಿವೆ. ಇನ್ನು ಮುಂದಿನ 10 ವರ್ಷಗಳ ಕಾಲ ದೇಶಕ್ಕಾಗಿ ಆಡಿ ಇನ್ನೂ ಹತ್ತು ಪ್ರಶಸ್ತಿಗಳನ್ನು ಗೆಲ್ಲುವ ಇಚ್ಛೆಯನ್ನೂ ಅವರು ಈ ವೇಳೆ ವ್ಯಕ್ತಪಡಿಸಿದ್ದರು.

ನೆಟ್ಟಿಗರಿಂದ ತಮಾಷೆಯ ಪ್ರತಿಕ್ರಿಯೆ

ಮತ್ತೊಂದೆಡೆ, ಪಂದ್ಯದ ಸಮಯದಲ್ಲಿ ಕ್ಯಾಮರಾಮನ್ ಪದೇ ಪದೇ ಮಾಹಿಕಾ ಶರ್ಮಾ ಅವರನ್ನು ತೋರಿಸುತ್ತಿದ್ದುದರ ಬಗ್ಗೆ ನೆಟ್ಟಿಗರು ತಮಾಷೆಯ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಹಾರ್ದಿಕ್ ವಿಕೆಟ್ ಪಡೆದರೂ ಅಥವಾ ಸಿಕ್ಸರ್ ಬಾರಿಸಿದರೂ ಕ್ಯಾಮರಾ ಮಾಹಿಕಾ ಅವರತ್ತಲೇ ತಿರುಗುತ್ತಿದ್ದುದು ಈಗ ಟ್ರೋಲ್ ಆಗುತ್ತಿದೆ. ಸಂಜು ಸ್ಯಾಮ್ಸನ್, ಇಶಾನ್ ಕಿಶನ್ ಮತ್ತು ಜಸ್ಪ್ರೀತ್ ಬುಮ್ರಾ ಅವರ ಅದ್ಭುತ ಪ್ರದರ್ಶನದಿಂದ ಭಾರತ ತವರಿನಲ್ಲಿ ವಿಶ್ವಕಪ್ ಎತ್ತಿ ಹಿಡಿಯುವಲ್ಲಿ ಯಶಸ್ವಿಯಾಗಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 2026ರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಬರೋಬ್ಬರಿ 96 ರನ್‌ಗಳ ಬೃಹತ್ ಅಂತರದಿಂದ ಮಣಿಸಿದ ಟೀಮ್ ಇಂಡಿಯಾ ಐತಿಹಾಸಿಕ ಸಾಧನೆ ಮಾಡಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡವು ಟಿ20 ವಿಶ್ವಕಪ್ ಇತಿಹಾಸದಲ್ಲಿ ಸತತ ಎರಡನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಈ ಮೈಲಿಗಲ್ಲು ತಲುಪಿದ ವಿಶ್ವದ ಮೊಟ್ಟಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಈ ಗೆಲುವಿನೊಂದಿಗೆ ಭಾರತ ಒಟ್ಟು ಮೂರು ಬಾರಿ ಟಿ20 ವಿಶ್ವಕಪ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. 2007ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಪಾಕಿಸ್ತಾನವನ್ನು ಸೋಲಿಸಿ ಚೊಚ್ಚಲ ಟ್ರೋಫಿ ಗೆದ್ದಿದ್ದ ಭಾರತ, ಇತ್ತೀಚೆಗೆ 2024ರಲ್ಲಿ ರೋಹಿತ್ ಶರ್ಮಾ ಸಾರಥ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಮಣಿಸಿ ಎರಡನೇ ಬಾರಿಗೆ ಕಪ್ ಎತ್ತಿ ಹಿಡಿದಿತ್ತು. ಇದೀಗ 2026ರಲ್ಲಿ ಮೂರನೇ ಟ್ರೋಫಿ ಜಯಿಸುವ ಮೂಲಕ, ತಲಾ ಎರಡು ಬಾರಿ ಪ್ರಶಸ್ತಿ ಗೆದ್ದಿದ್ದ ವೆಸ್ಟ್ ಇಂಡೀಸ್ ಮತ್ತು ಇಂಗ್ಲೆಂಡ್ ತಂಡಗಳನ್ನು ಹಿಂದಿಕ್ಕಿ ಭಾರತ ಅಗ್ರಸ್ಥಾನಕ್ಕೇರಿದೆ.

Read More
Next Story