Virat Kohli out of Afghan series; Wicketkeeper Ishan Kishan lucky!
x

ವಿರಾಟ್‌ ಕೊಹ್ಲಿ 

ಅಫ್ಘಾನ್ ಸರಣಿಯಿಂದ ವಿರಾಟ್ ಕೊಹ್ಲಿ ಔಟ್; ವಿಕೆಟ್ ಕೀಪರ್ ಇಶಾನ್ ಕಿಶನ್‌ಗೆ ಲಕ್!

ರೋಹಿತ್ ಮತ್ತು ಗಿಲ್ ಆರಂಭಿಕರಾಗಿ ಕಣಕ್ಕಿಳಿದರೆ, ವಿರಾಟ್ ಕೊಹ್ಲಿ ಆಡುತ್ತಿದ್ದ ಅತ್ಯಂತ ಪ್ರಮುಖವಾದ 3ನೇ ಕ್ರಮಾಂಕದಲ್ಲಿ ಇಶಾನ್ ಕಿಶನ್ ಬ್ಯಾಟ್ ಬೀಸಲಿದ್ದಾರೆ. ಗಾಯದಿಂದ ಚೇತರಿಸಿಕೊಂಡಿರುವ ಶ್ರೇಯಸ್ ಅಯ್ಯರ್ 4ನೇ ಸ್ಥಾನದಲ್ಲಿ ಆಡಲಿದ್ದಾರೆ.


Click the Play button to hear this message in audio format

ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಬಹುನಿರೀಕ್ಷಿತ ಸರಣಿ ಆರಂಭಕ್ಕೂ ಮುನ್ನವೇ ಟೀಮ್ ಇಂಡಿಯಾಕ್ಕೆ ಭಾರಿ ಆಘಾತ ಎದುರಾಗಿದೆ. ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ರನ್ ಮಷೀನ್ ವಿರಾಟ್ ಕೊಹ್ಲಿ, ಗಾಯದ ಸಮಸ್ಯೆಯಿಂದಾಗಿ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ. ಇದು ಮುಂಬರುವ ಏಕದಿನ ವಿಶ್ವಕಪ್‌ ಸಿದ್ಧತೆಯಲ್ಲಿದ್ದ ಭಾರತ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ.

ಆರ್‌ಸಿಬಿ ಚಾಂಪಿಯನ್ ಪಟ್ಟದ ಬೆನ್ನಲ್ಲೇ ಆಘಾತ!

2026ರ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಚಾಂಪಿಯನ್ ಆಗುವಲ್ಲಿ ವಿರಾಟ್ ಕೊಹ್ಲಿ ಅವರದ್ದೇ ಸಿಂಹಪಾಲು. ಗುಜರಾತ್ ಟೈಟಾನ್ಸ್ ವಿರುದ್ಧದ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ 75 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿ ತಂಡಕ್ಕೆ ಟ್ರೋಫಿ ತಂದುಕೊಟ್ಟಿದ್ದರು. ಆದರೆ, ಇದೇ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುವಾಗ ಕೊಹ್ಲಿ ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದರು. ತೀವ್ರ ನೋವಿನ ನಡುವೆಯೂ ತಂಡವನ್ನು ಗೆಲ್ಲಿಸಿದ್ದ ರನ್ ಮಷೀನ್, ಈಗ ಚಿಕಿತ್ಸೆಗಾಗಿ ಸರಣಿಯಿಂದ ದೂರ ಉಳಿಯಬೇಕಾಗಿ ಬಂದಿದೆ. ಬಿಸಿಸಿಐ ಮೂಲಗಳು ಕೂಡ ಕೊಹ್ಲಿ ಅಲಭ್ಯತೆಯನ್ನು ಖಚಿತಪಡಿಸಿವೆ.

ಕೊಹ್ಲಿ ಸ್ಥಾನಕ್ಕೆ ಇಶಾನ್ ಕಿಶನ್ ಎಂಟ್ರಿ?

ಜೂನ್ 13 ರಿಂದ ಆರಂಭವಾಗಲಿರುವ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ ಅವರ ಗೈರುಹಾಜರಿಯಲ್ಲಿ 3ನೇ ಕ್ರಮಾಂಕದಲ್ಲಿ ಯಾರು ಆಡಲಿದ್ದಾರೆ ಎಂಬ ಕುತೂಹಲ ಮೂಡಿದೆ. ಸದ್ಯದ ವರದಿಗಳ ಪ್ರಕಾರ, ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಅವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಸಿಗುವುದು ಬಹುತೇಕ ಖಚಿತವಾಗಿದೆ.

ಗುರ್ನೂರ್‌ ಬ್ರಾರ್‌ ಆಕರ್ಷಣೆ

ರೋಹಿತ್ ಮತ್ತು ಗಿಲ್ ಆರಂಭಿಕರಾಗಿ ಕಣಕ್ಕಿಳಿದರೆ, ವಿರಾಟ್ ಕೊಹ್ಲಿ ಆಡುತ್ತಿದ್ದ ಅತ್ಯಂತ ಪ್ರಮುಖವಾದ 3ನೇ ಕ್ರಮಾಂಕದಲ್ಲಿ ಇಶಾನ್ ಕಿಶನ್ ಬ್ಯಾಟ್ ಬೀಸಲಿದ್ದಾರೆ. ಗಾಯದಿಂದ ಚೇತರಿಸಿಕೊಂಡಿರುವ ಶ್ರೇಯಸ್ ಅಯ್ಯರ್ 4ನೇ ಸ್ಥಾನದಲ್ಲಿ ಹಾಗೂ ವಿಕೆಟ್ ಕೀಪರ್ ಕೆ.ಎಲ್ ರಾಹುಲ್ 5ನೇ ಕ್ರಮಾಂಕದಲ್ಲಿ ತಂಡಕ್ಕೆ ಆಸರೆಯಾಗಲಿದ್ದಾರೆ. ವೇಗದ ಬೌಲಿಂಗ್ ಆಲ್‌ರೌಂಡರ್ ಆಗಿ ಹಾರ್ದಿಕ್ ಪಾಂಡ್ಯ 6ನೇ ಸ್ಥಾನದಲ್ಲಿದ್ದರೆ, ಸ್ಪಿನ್ ಆಲ್‌ರೌಂಡರ್ ಆಗಿ ವಾಷಿಂಗ್ಟನ್ ಸುಂದರ್ ಕಾಣಿಸಿಕೊಳ್ಳಲಿದ್ದಾರೆ. ಬೌಲಿಂಗ್ ಜವಾಬ್ದಾರಿಯನ್ನು ಕುಲ್ದೀಪ್ ಯಾದವ್ ನೇತೃತ್ವದ ಸ್ಪಿನ್ ವಿಭಾಗ ಹಾಗೂ ಅರ್ಷದೀಪ್, ಪ್ರಸಿದ್ಧ್ ಕೃಷ್ಣ ಮತ್ತು ಪಂಜಾಬ್‌ನ ಗುರ್ನೂರ್ ಬ್ರಾರ್ ವೇಗದ ಬೌಲರ್‌ಗಳಾಗಿ ತಂಡಕ್ಕೆ ಆಯ್ಕೆಯಾಗಿದ್ದಾರೆ.

Read More
Next Story