
ಚಿತ್ರ ನಿರ್ದೇಶಕ ಲಲಿತ್ ವಚಾನಿ ನಿರ್ದೇಶಿಸಿರುವ ಈ ಸಾಕ್ಷ್ಯಚಿತ್ರ ಉಮರ್ ಖಾಲಿದ್ ಅವರ ಬಂಧನ ಮತ್ತು ಜೈಲು ವಾಸದ ಹಿನ್ನೆಲೆಯನ್ನು ಒಳಗೊಂಡಿದೆ.
ಎಬಿವಿಪಿ ವಿರೋಧಕ್ಕೆ ಮಣಿದ ಎನ್‌ಎಲ್‌ಎಸ್‌ಐಯು; ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ ರದ್ದು
ನಿರ್ದೇಶಕ ಲಲಿತ್ ವಚಾನಿ ನಿರ್ದೇಶಿಸಿರುವ ಈ ಸಾಕ್ಷ್ಯಚಿತ್ರ ಉಮರ್ ಖಾಲಿದ್ ಬಂಧನ ಮತ್ತು ಜೈಲು ವಾಸದ ಹಿನ್ನೆಲೆಯನ್ನು ಒಳಗೊಂಡಿದೆ. 2020ರ ಸೆ. 13ರಂದು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅಡಿಯಲ್ಲಿ ಉಮರ್ ಖಾಲಿದ್ ಬಂಧನಕ್ಕೊಳಗಾಗಿದ್ದರು.
ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (ಎನ್‌ಎಲ್‌ಎಸ್‌ಐಯು)ನಲ್ಲಿ ಮಾಜಿ ಜೆಎನ್‌ಯು ವಿದ್ಯಾರ್ಥಿ ನಾಯಕ ಹಾಗೂ ಕಾರ್ಯಕರ್ತ ಉಮರ್ ಖಾಲಿದ್ ಕುರಿತು ನಿರ್ಮಿಸಲಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ. Prisoner No. 626710 is Present ಹೆಸರಿನ ಈ ಸಾಕ್ಷ್ಯಚಿತ್ರವನ್ನು ಆರಂಭದಲ್ಲಿ ಸೆಪ್ಟೆಂಬರ್ 12ರಂದು ಪ್ರದರ್ಶಿಸಲು ಉದ್ದೇಶಿಸಲಾಗಿತ್ತು. ಆದರೆ ಎಬಿವಿಪಿ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು. ಇದೀಗ ವಿದ್ಯಾರ್ಥಿ ಸಂಘಟನೆ ಹಾಗೂ ಸೊಸೈಟಿ ಸಮಿತಿ ಪ್ರದರ್ಶನವನ್ನು ಸಂಪೂರ್ಣವಾಗಿ ರದ್ದುಗೊಳಿಸಲು ನಿರ್ಧರಿಸಿದೆ.
ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ), ಕಾರ್ಯಕ್ರಮ ರದ್ದುಪಡಿಸುವಂತೆ ಕೇಂದ್ರ ಗೃಹ ಸಚಿವರು ಹಾಗೂ ರಾಜ್ಯಪಾಲರಿಗೆ ಪತ್ರ ಬರೆದಿತ್ತು. ಪ್ರದರ್ಶನ ಮುಂದುವರಿಸಿದರೆ ಪ್ರತಿಭಟನೆ ನಡೆಸುವುದಾಗಿ ಸಂಘಟನೆ ಎಚ್ಚರಿಕೆ ನೀಡಿತ್ತು.
ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ಎಫ್‌ಐಆರ್ ಭೀತಿ
ಎನ್‌ಎಲ್‌ಎಸ್‌ಐಯು ವಿದ್ಯಾರ್ಥಿ ಸಂಘಟನೆಯ ಸದಸ್ಯರೊಬ್ಬರ ಪ್ರಕಾರ, ಸಾಕ್ಷ್ಯಚಿತ್ರ ಪ್ರದರ್ಶನದಿಂದ ವಿದ್ಯಾರ್ಥಿಗಳು ಮತ್ತು ಬೋಧಕ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಾಗುವ ಸಾಧ್ಯತೆ ಇತ್ತು. ಇದರಿಂದ ಅವರ ಶಿಕ್ಷಣದ ಮೇಲೂ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.
ಸಾಕ್ಷ್ಯಚಿತ್ರದ ಹಿನ್ನೆಲೆ
ನಿರ್ದೇಶಕ ಲಲಿತ್ ವಚಾನಿ ನಿರ್ದೇಶಿಸಿರುವ ಈ ಸಾಕ್ಷ್ಯಚಿತ್ರ ಉಮರ್ ಖಾಲಿದ್ ಅವರ ಬಂಧನ ಮತ್ತು ಜೈಲು ವಾಸದ ಹಿನ್ನೆಲೆಯನ್ನು ಒಳಗೊಂಡಿದೆ. ದೆಹಲಿ ಪೊಲೀಸರು 2020ರ ಸೆಪ್ಟೆಂಬರ್ 13ರಂದು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅಡಿಯಲ್ಲಿ ಅವರನ್ನು ಬಂಧಿಸಿದ್ದರು. ಎನ್‌ಎಲ್‌ಎಸ್‌ಐಯುನಲ್ಲಿನ ಪ್ರದರ್ಶನ ರದ್ದುಪಡಿಸುವ ನಿರ್ಧಾರವು ಹೈದರಾಬಾದ್‌ನ ಐಐಟಿ ಕೂಡ ಇದೇ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ರದ್ದುಗೊಳಿಸಿದ ಎರಡು ದಿನಗಳ ಬಳಿಕ ಬಂದಿದೆ.

