ಪರಪ್ಪನ ಅಗ್ರಹಾರ ಜೈಲಿನಲ್ಲೇ ದರ್ಶನ್‌ಗೆ ಚಿಕಿತ್ಸೆ ಆರಂಭ- 2-3 ದಿನಕ್ಕೊಮ್ಮೆ ಫಿಸಿಯೋಥೆರಪಿ
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಬೆನ್ನುನೋವಿನ ಹಿನ್ನೆಲೆಯಲ್ಲಿ ಜೈಲಿನಲ್ಲೇ ಫಿಸಿಯೋಥೆರಪಿ ಆರಂಭಿಸಲಾಗಿದೆ. ಪ್ರತಿ 2-3 ದಿನಕ್ಕೊಮ್ಮೆ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ ಆರಂಭಿಸಲಾಗಿದೆ. ಬೆನ್ನುನೋವಿನಿಂದ ಬಳಲುತ್ತಿರುವ ದರ್ಶನ್‌ಗೆ ಚಿಕಿತ್ಸೆ ನೀಡುವಂತೆ ನ್ಯಾಯಾಲಯ ಸೂಚನೆ ನೀಡಿತ್ತು. ಅದರಂತೆ ಸಂಜಯ್ ಗಾಂಧಿ ಆಸ್ಪತ್ರೆಯ ವೈದ್ಯರ ತಂಡ ಜೈಲಿಗೆ ಭೇಟಿ ನೀಡಿ, ಬ್ಯಾರಕ್‌ನಲ್ಲೇ ಸುಮಾರು ಒಂದೂವರೆ ಗಂಟೆಗಳ ಕಾಲ ಚಿಕಿತ್ಸೆ ನೀಡಿದೆ. ಇನ್ನು ಪ್ರತಿ ಎರಡು ಅಥವಾ ಮೂರು ದಿನಗಳಿಗೊಮ್ಮೆ ದರ್ಶನ್‌ಗೆ ಫಿಸಿಯೋಥೆರಪಿ ನೀಡಲು ವ್ಯವಸ್ಥೆ ಮಾಡಲಾಗಿದೆ.
Next Story

