ಧನ್ವೀರ್‌ಗೆ ಕಾನೂನು ಸಂಕಷ್ಟ: 3 ಎಫ್‌ಐಆರ್ ರದ್ದತಿಗೆ ಹೈಕೋರ್ಟ್ ಮೊರೆ
x

ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಮೂರು ಪ್ರತ್ಯೇಕ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿ ನಟ ಧನ್ವೀರ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

Click the Play button to hear this message in audio format

ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಮೂರು ಪ್ರತ್ಯೇಕ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿ ನಟ ಧನ್ವೀರ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆಯಲಿದೆ.

ನಟಿ ವಿಜಯಲಕ್ಷ್ಮಿ ಅವರ ಮ್ಯಾನೇಜರ್ ನಾಗರಾಜ್ ನೀಡಿದ ದೂರಿನ ಮೇರೆಗೆ ಆರ್.ಆರ್. ನಗರ ಪೊಲೀಸ್ ಠಾಣೆಯಲ್ಲಿ ಧನ್ವೀರ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಭೋಜರಾಜ್ ರೈ ನೀಡಿದ ದೂರಿನ ಆಧಾರದ ಮೇಲೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲೂ ಎಫ್‌ಐಆರ್ ದಾಖಲಾಗಿತ್ತು.

ಇನ್ನು ನಟ ಝೈದ್ ಖಾನ್ ಅಭಿಮಾನಿಗಳ ಸಂಘದ ಅಧ್ಯಕ್ಷ ವಿನಾಯಕ ನೀಡಿದ ದೂರಿನ ಅನ್ವಯ ಚಾಮರಾಜಪೇಟೆ ಮತ್ತು ಬ್ಯಾಟರಾಯನಪುರ ಪೊಲೀಸ್ ಠಾಣೆಗಳಲ್ಲೂ ಪ್ರಕರಣಗಳು ದಾಖಲಾಗಿದ್ದವು.

ಈ ಎಲ್ಲಾ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ನಟ ಧನ್ವೀರ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ವಿರುದ್ಧ ದಾಖಲಾಗಿರುವ ಮೂರು ಪ್ರತ್ಯೇಕ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ನಡೆಯಲಿದ್ದು, ನ್ಯಾಯಾಲಯದ ತೀರ್ಪಿನತ್ತ ಕುತೂಹಲ ಮೂಡಿದೆ.

Read More
Next Story