ಐದನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ
x

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ 7ನೇ ದಿನಕ್ಕೆ ಕಾಲಿಟ್ಟಿದೆ. 15 ಸಾವಿರ ರೂ. ಗೌರವಧನ, 5 ಲಕ್ಷ ರೂ. ನಿವೃತ್ತಿ ಪರಿಹಾರಕ್ಕೆ ಪಟ್ಟು.

ಐದನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ

ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ 15 ಸಾವಿರ ರೂಪಾಯಿ ಗೌರವಧನ ನೀಡಬೇಕು ಹಾಗೂ ಇತರ ಬೇಡಿಕೆಗಳನ್ನು ಈಡೇರಿಸಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಆಗ್ರಹವಾಗಿದೆ.


Click the Play button to hear this message in audio format

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅಹೋರಾತ್ರಿ ಧರಣಿ ಐದನೇ ದಿನಕ್ಕೆ ಕಾಲಿಟ್ಟಿದೆ. ಐದು ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ತಮ್ಮ ಮನವಿಗೆ ಸ್ಪಂದಿಸುತ್ತಿಲ್ಲ ಎಂದು ಕಾರ್ಯಕರ್ತೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಿಂಗಳಿಗೆ 15 ಸಾವಿರ ರೂಪಾಯಿ ಗೌರವಧನ ನೀಡುವ ಕುರಿತು ಸರ್ಕಾರ ಅಧಿಕೃತ ಆದೇಶದ ಪ್ರತಿಯನ್ನು ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಬೇಡಿಕೆಗಳು ಈಡೇರುವವರೆಗೂ ಹೋರಾಟವನ್ನು ಕೈಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಸಿಎಂ ವಿರುದ್ಧ ಆಶಾ ಕಾರ್ಯಕರ್ತೆಯರ ಅಸಮಾಧಾನ

ಪ್ರತಿಭಟನಾ ಸ್ಥಳದಲ್ಲಿ ಮಾತನಾಡಿದ ಆಶಾ ಕಾರ್ಯಕರ್ತೆಯರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಐದು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದರೂ ತಮ್ಮ ಆರೋಗ್ಯ ವಿಚಾರಿಸಲು ಮುಖ್ಯಮಂತ್ರಿ ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಮಹಿಳೆಯರ ಬಗ್ಗೆ ಮುಖ್ಯಮಂತ್ರಿಗಳಿಗೆ ಕಾಳಜಿ ಇಲ್ಲವೇ ಎಂದು ಪ್ರಶ್ನಿಸಿರುವ ಅವರು, ಗೌರವಧನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವುದಿರಲಿ, ಸೌಜನ್ಯಕ್ಕಾದರೂ ತಮ್ಮತ್ತ ತಿರುಗಿ ನೋಡಿಲ್ಲ ಎಂದು ಆರೋಪಿಸಿದ್ದಾರೆ.

ಕಲ್ಲುಬಂಡೆಯನ್ನೂ ಕರಗಿಸುವ ಶಕ್ತಿ ನಮ್ಮ ಹೋರಾಟಕ್ಕಿದೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಲ್ಲುಬಂಡೆಯಂತಿರಬಹುದು. ಆದರೆ ನಮ್ಮ ಹೋರಾಟಕ್ಕೆ ಆ ಕಲ್ಲುಬಂಡೆಯನ್ನೂ ಕರಗಿಸುವ ಶಕ್ತಿಯಿದೆ ಎಂದು ಆಶಾ ಕಾರ್ಯಕರ್ತೆಯರು ಹೇಳಿದ್ದಾರೆ. ನಮ್ಮ ಹೋರಾಟ ಆ ಕಲ್ಲುಬಂಡೆಯನ್ನು ಕೆತ್ತಿ ಮೂರ್ತಿಯನ್ನಾಗಿ ಮಾಡುತ್ತದೆ. ಮುಖ್ಯಮಂತ್ರಿ ನಮ್ಮ ಸಮಸ್ಯೆಗಳನ್ನು ಬಗೆಹರಿಸಿ ಜನರ ಮೆಚ್ಚುಗೆಗೆ ಪಾತ್ರರಾಗಬೇಕು. ಇಲ್ಲವಾದರೆ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

15 ಸಾವಿರ ರೂ. ಗೌರವಧನಕ್ಕೆ ಆಗ್ರಹ

ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ 15 ಸಾವಿರ ರೂಪಾಯಿ ಗೌರವಧನ ನೀಡಬೇಕು ಹಾಗೂ ಇತರ ಬೇಡಿಕೆಗಳನ್ನು ಈಡೇರಿಸಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಆಗ್ರಹವಾಗಿದೆ. ಈ ಸಂಬಂಧ ಸರ್ಕಾರ ಅಧಿಕೃತ ಆದೇಶ ಹೊರಡಿಸಿ ಅದರ ಪ್ರತಿಯನ್ನು ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಸರ್ಕಾರದಿಂದ ಸ್ಪಷ್ಟ ಭರವಸೆ ಸಿಗುವವರೆಗೂ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ ಮುಂದುವರಿಸುವುದಾಗಿ ತಿಳಿಸಿದ್ದಾರೆ.

Read More
Next Story