ಅಧಿಕಾರಿಗಳಿಂದ 7 ಪರ್ಸೆಂಟ್ ಲಂಚ; ಸಿಡಿದೆದ್ದ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ
KRIDLನಲ್ಲಿ ಅಧಿಕಾರಿಗಳು ಶೇಕಡಾ 7 ರಷ್ಟು ಲಂಚವನ್ನು ಗುತ್ತಿಗೆದಾರರ ಬಳಿ ಕೇಳುತ್ಥಾರೆ ಎಂದು ಆರೋಪಿಸಿ ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಅವರು ಮುಖ್ಯಮಂತ್ರಿಗಳಿಗೆ ಬರೆದ ಪತ್ರ ಬರೆದಿದ್ದಾರೆ.
ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (KRIDL)ನಲ್ಲಿ ಅಧಿಕಾರಿಗಳು ಶೇ. 7 ರಷ್ಟು ಲಂಚ ಪಡೆಯುತ್ತಿದ್ದಾರೆ ಎಂದು ಆರೋಪಿಸಿ ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಅವರು ಮುಖ್ಯಮಂತ್ರಿಗಳಿಗೆ ಬರೆದ ಪತ್ರ ಭಾರಿ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ 'ದ ಫೆಡರಲ್ ಕರ್ನಾಟಕ' ಜತೆ EXLUSIVE ಸಂದರ್ಶನದಲ್ಲಿ ಅಶೋಕ್ ಕುಮಾರ್ ರೈ ಮಾತನಾಡಿದ್ದಾರೆ. ಅಧಿಕಾರಿಗಳ ಲಂಚ ಹೇಗೆ ಕೇಳುತ್ತಿದ್ದರು, ಗುತ್ತಿಗೆದಾರರಿಗೆ ಏನು ಒತ್ತಡ ಹಾಕಿದರು ಎಂದು ವಿವರವಾಗಿ ಹೇಳಿದ್ದಾರೆ. ನಾನು ಲಂಚ ತೆಗೆದುಕೊಳ್ಳಲ್ಲ, ಲಂಚ ತೆಗೆದುಕೊಂಡ ಅಧಿಕಾರಿಗಳ ವಿರುದ್ಧ ಕ್ರಮ ಆಗಲಿಲ್ಲ ಎಂದರೆ ಸುಮ್ಮನಿರಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಗುತ್ತಿಗೆದಾರರ ಬಳಿ ಅಧಿಕಾರಿಗಳು ಶೇ.7 ರಷ್ಟು ಲಂಚವನ್ನು ಕೇಳಿದ್ದಾರೆ. ಲಂಚ ಕೊಡದಿದ್ದರೆ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡದೆ ಕಿರುಕುಳ ನೀಡುತ್ತಾರೆ. ಬೇಸತ್ತು ಗುತ್ತಿಗೆದಾರರು ನನಗೆ ದೂರು ನೀಡಿದರು. ಇದು ನಿಜನೂ ಕೂಡ. ಈ ಹಿನ್ನೆಲೆಯಲ್ಲಿ ನಾನು ಸಿಎಂಗೆ ಪತ್ರ ಬರೆದಿದ್ದೇನೆ ಎಂದು ಹೇಳಿದ್ದಾರೆ.
ನಾನು ಒಂದು ರೂಪಾಯಿ ಲಂಚ ತೆಗೆದುಕೊಂಡಿಲ್ಲ, ಯಾರ ಬಳಿಯೂ ಹಣ ಕೇಳಿಲ್ಲ. ಲಂಚ ತೆಗೆದುಕೊಳ್ಳಬೇಡಿ ಎಂದು ಅಧಿಕಾರಿಗಳಿಗೆ ಹೇಳಿದ ಬಳಿಕವೂ ಗುತ್ತಿಗೆದಾರರಿಗೆ ಬೆದರಿಕೆ ಹಾಕಿದ್ದಾರೆ. ಈ ಅಧಿಕಾರಿಗಳ ವಿರುದ್ಧ ಕ್ರಮ ಆಗಬೇಕು, ಇಲ್ಲದಿದ್ದರೆ ಸುಮ್ಮನಿರಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ನನ್ನಿಂದ ಸರ್ಕಾರಕ್ಕೆ ಯಾವುದೇ ಮುಜುಗರವಾಗಿಲ್ಲ, ಕೆಲ ಅಧಿಕಾರಿಗಳಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ. ಅದಕ್ಕೆ ಪತ್ರ ಬರೆದಿದ್ದೇನೆ. ಬಿಜೆಪಿ ಕೆಲ ವಿಚಾರಗಳಲ್ಲಿ ಕರಾವಳಿ ಭಾಗದ ಜನರನ್ನು ಮರುಳು ಮಾಡುತ್ತಾರೆ. ಚುನಾವಣೆ ಸಂದರ್ಭದಲ್ಲಿ ಕೆಲವರನ್ನು ಜೈಲಿಗೆ ಕಳಿಸುತ್ತಾರೆ. ಇದು ಬಿಜೆಪಿ ಅಜೆಂಡಾ ಎಂದು ಆರೋಪಿಸಿದ್ದಾರೆ.
ಇದೇ ವೇಳೆ ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಮಾಡುವ ಬಗ್ಗೆ ಸಮರ್ಥಿಸಿಕೊಂಡಿದ್ದಾರೆ. ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಮಾಡಿದರೆ ತಪ್ಪೇನು ಎಂದು ಪ್ರಶ್ನಿಸಿರುವ ಅವರು, ದಸರಾದಲ್ಲಿ ಕಂಬಳ ನೋಡಲು ಹೆಚ್ಚು ಜನ ಬರುತ್ತಾರೆ ಎಂದು ಹೇಳಿದ್ದಾರೆ.

