x

ಸರ್ಕಾರಿ ಲೆಟರ್ ಹೆಡ್‌ ಮೂಲಕ ಪೂಜೆಗೆ ಆಹ್ವಾನಿಸಿದ್ದಕ್ಕೆ ಪ್ರಗತಿಪರರ ವಿರೋಧ

ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿ ಧಾರ್ಮಿಕ ಪೂಜಾ ಕಾರ್ಯಕ್ರಮಕ್ಕೆ ಸಿಬ್ಬಂದಿ, ವಿದ್ಯಾರ್ಥಿಗಳಿಗೆ ಆಹ್ವಾನ ನೀಡಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದ್ದು, ಶಿಕ್ಷಣ ತಜ್ಞರು ಸಿಎಂಗೆ ಪತ್ರ ಬರೆದಿದ್ದಾರೆ.


Click the Play button to hear this message in audio format

ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿಗಳು ಸಾರ್ವಜನಿಕ ಆಮಂತ್ರಣ ಪತ್ರದ ಮೂಲಕ ಧಾರ್ಮಿಕ ಆಚರಣೆ ನಡೆಸುತ್ತಿರುವ ಕುರಿತು ತೀವ್ರ ಆಕ್ಷೇಪಣೆ ವ್ಯಕ್ತವಾಗಿದೆ. ಈ ಬಗ್ಗೆ ಹಲವರು ಸಿಎಂಗೆ ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆಮಂತ್ರಣ ಪತ್ರದಲ್ಲಿ "ನಮ್ಮ ಪರಿವಾರದ ವತಿಯಿಂದ" ಎಂದು ಹೇಳುತ್ತಲೇ ವಿಶ್ವವಿದ್ಯಾಲಯದ ಮುಖ್ಯ ಆವರಣದ ಎಲ್ಲಾ ಅಧಿಕಾರಿಗಳು, ಬೋಧಕ-ಭೋದಕೇತರ-ಕಾರ್ಮಿಕ ವರ್ಗ ಹಾಗೂ ವಿದ್ಯಾರ್ಥಿಗಳನ್ನು "ಶ್ರೀ ಸತ್ಯನಾರಾಯಣ ಪೂಜೆ, ನವಗ್ರಹ ಶಾಂತಿ ಹೋಮ ಮತ್ತು ಶ್ರೀ ಮಹಾಗಣಪತಿ ಪೂಜಾ ಕಾರ್ಯಕ್ರಮ"ಕ್ಕೆ ಅಧಿಕೃತವಾಗಿ ಆಹ್ವಾನಿಸಿದ್ದಾರೆ. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಶಿಕ್ಷಣ ತಜ್ಷರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

Read More
Next Story