x

ಬಳ್ಳಾರಿಯ ಮೋತಿ ಸರ್ಕಲ್ ಇಂದಿರಾ ಕ್ಯಾಂಟೀನ್‌ನಲ್ಲಿ ಕಳಪೆ ಆಹಾರ ಆರೋಪ; ಹೆಚ್ಚುವರಿ ಹಣ ವಸೂಲಿ ಬಗ್ಗೆಯೂ ದೂರು

ಬಳ್ಳಾರಿಯ ಮೋತಿ ಸರ್ಕಲ್ ಇಂದಿರಾ ಕ್ಯಾಂಟೀನ್‌ನಲ್ಲಿ ಕಳಪೆ ಆಹಾರ ನೀಡುವ ಜೊತೆಗೆ ನಿಗದಿತ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.


Click the Play button to hear this message in audio format

ಬಡವರು, ವಿದ್ಯಾರ್ಥಿಗಳು ಮತ್ತು ರೋಗಿಗಳಿಗೆ ಕಡಿಮೆ ದರದಲ್ಲಿ ಆಹಾರ ಒದಗಿಸುವ ಉದ್ದೇಶದಿಂದ ಆರಂಭಿಸಲಾದ ಇಂದಿರಾ ಕ್ಯಾಂಟೀನ್ ಇದೀಗ ಆಹಾರದ ಗುಣಮಟ್ಟದ ವಿಚಾರವಾಗಿ ವಿವಾದಕ್ಕೆ ಸಿಲುಕಿದೆ. ಬಳ್ಳಾರಿಯ ಮೋತಿ ಸರ್ಕಲ್‌ನಲ್ಲಿರುವ ಇಂದಿರಾ ಕ್ಯಾಂಟೀನ್‌ನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಕಾಲೇಜು ವಿದ್ಯಾರ್ಥಿಗಳು ಹಾಗೂ ಆಸ್ಪತ್ರೆಗಳಿಗೆ ಬರುವ ರೋಗಿಗಳು ಮತ್ತು ಅವರ ಸಂಬಂಧಿಕರು ಈ ಕ್ಯಾಂಟೀನ್‌ನ ಆಹಾರವನ್ನೇ ಅವಲಂಬಿಸಿದ್ದಾರೆ. ಆದರೆ ಆಹಾರದ ಗುಣಮಟ್ಟ ಸರಿಯಿಲ್ಲ ಎಂಬ ದೂರುಗಳ ಜೊತೆಗೆ, ನಿಗದಿತ ದರಕ್ಕಿಂತ ಹೆಚ್ಚುವರಿ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಈ ಕುರಿತು ದೂರು ನೀಡಿದರೂ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲ ಎಂಬ ಅಸಮಾಧಾನ ವ್ಯಕ್ತವಾಗಿದೆ. ಕ್ಯಾಂಟೀನ್‌ನಲ್ಲಿ ಪ್ರತಿದಿನ ಆಹಾರದ ಗುಣಮಟ್ಟ ಪರಿಶೀಲನೆ ನಡೆಸಬೇಕು, ಹೆಚ್ಚುವರಿ ಹಣ ವಸೂಲಿ ಆರೋಪದ ಬಗ್ಗೆ ತನಿಖೆ ನಡೆಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬಂದಿದೆ. ಬಡವರ ಹಸಿವು ನೀಗಿಸಬೇಕಾದ ಇಂದಿರಾ ಕ್ಯಾಂಟೀನ್‌ನಲ್ಲೇ ಇಂತಹ ಆರೋಪಗಳು ಕೇಳಿಬರುತ್ತಿರುವುದಕ್ಕೆ ಕಾರಣವೇನು? ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾ

Read More
Next Story