ಬಳ್ಳಾರಿ ವಿಮ್ಸ್‌ನಲ್ಲಿ ಉಚಿತ ಔಷಧಿಗೂ ಕಮಿಷನ್ ಕಂಟಕ? | ಖಾಸಗಿ ಮೆಡಿಕಲ್, ಲ್ಯಾಬ್‌ಗಳತ್ತ ರೋಗಿಗಳು
ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಉಚಿತ ಔಷಧಿಗಳಿದ್ದರೂ ಹೊರಗೆ ಚೀಟಿ ಬರೆಯುತ್ತಿರುವ ಆರೋಪ ಕೇಳಿಬಂದಿದೆ. ಖಾಸಗಿ ಲ್ಯಾಬ್‌ಗಳಿಗೆ ರೋಗಿಗಳನ್ನೂ ಕಳುಹಿಸಲಾಗುತ್ತಿದೆ.
ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ (ವಿಮ್ಸ್) ಆಸ್ಪತ್ರೆ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಆಸ್ಪತ್ರೆಯಲ್ಲಿ ಉಚಿತ ಔಷಧಿಗಳ ದಾಸ್ತಾನು ಇದ್ದರೂ ವೈದ್ಯರು ಹೊರಗಿನ ಮೆಡಿಕಲ್ ಶಾಪ್‌ಗಳಿಗೆ ಚೀಟಿ ಬರೆದುಕೊಡುತ್ತಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲ, ಆಸ್ಪತ್ರೆಯಲ್ಲಿ ಪರೀಕ್ಷಾ ಸೌಲಭ್ಯವಿದ್ದರೂ ರೋಗಿಗಳನ್ನು ಖಾಸಗಿ ಲ್ಯಾಬ್‌ಗಳಿಗೆ ಕಳುಹಿಸಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಇದರ ಹಿಂದೆ ಕಮಿಷನ್ ವ್ಯವಹಾರ ನಡೆಯುತ್ತಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಆರೋಪ ಸಾಬೀತಾದರೆ ಕ್ರಮ ಕೈಗೊಳ್ಳುವುದಾಗಿ ವಿಮ್ಸ್ ನಿರ್ದೇಶಕರು ಭರವಸೆ ನೀಡಿದ್ದಾರೆ.
Next Story

