ಬಾಣಸವಾಡಿ: 2 ವರ್ಷದ ಹೆಣ್ಣು ಮಗುವಿನ ಅನುಮಾನಾಸ್ಪದ ಸಾವು; ಲಿವ್-ಇನ್ ಪೋಷಕರ ವಿರುದ್ಧ ದೂರು ದಾಖಲು
x

ನಗರದ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ವರ್ಷದ ಹೆಣ್ಣು ಮಗುವೊಂದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಲಿವ್-ಇನ್ ರಿಲೇಷನ್‌ಶಿಪ್‌ನಲ್ಲಿದ್ದ ಪೋಷಕರ ಮೇಲೆಯೇ ಅನುಮಾನ ವ್ಯಕ್ತವಾಗಿದೆ. 

ಬಾಣಸವಾಡಿ: 2 ವರ್ಷದ ಹೆಣ್ಣು ಮಗುವಿನ ಅನುಮಾನಾಸ್ಪದ ಸಾವು; ಲಿವ್-ಇನ್ ಪೋಷಕರ ವಿರುದ್ಧ ದೂರು ದಾಖಲು

ಮೃತ ಮಗುವನ್ನು ಕಾರ್ಲೆಟ್ ಡೈಸಿ (2) ಎಂದು ಗುರುತಿಸಲಾಗಿದೆ. ಮಗುವಿನ ತಂದೆ ಜೇಸನ್ ಆಂಥೋನಿ ಹಾಗೂ ತಾಯಿ ರೋಸ್ಲಿನ್ ಕಳೆದ ಹಲವು ವರ್ಷಗಳಿಂದ ಬಾಣಸವಾಡಿಯ ಇಂದಿರಾ ಸ್ಟ್ರೀಟ್‌ನಲ್ಲಿ ಲಿವ್-ಇನ್ ರಿಲೇಷನ್‌ಶಿಪ್‌ನಲ್ಲಿ ವಾಸವಿದ್ದರು.


Click the Play button to hear this message in audio format

ನಗರದ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ವರ್ಷದ ಹೆಣ್ಣು ಮಗುವೊಂದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಲಿವ್-ಇನ್ ರಿಲೇಷನ್‌ಶಿಪ್‌ನಲ್ಲಿದ್ದ ಪೋಷಕರ ಮೇಲೆಯೇ ಅನುಮಾನ ವ್ಯಕ್ತವಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ತೀವ್ರಗೊಳಿಸಿದ್ದಾರೆ.

ಮೃತ ಮಗುವನ್ನು ಕಾರ್ಲೆಟ್ ಡೈಸಿ (2) ಎಂದು ಗುರುತಿಸಲಾಗಿದೆ. ಮಗುವಿನ ತಂದೆ ಜೇಸನ್ ಆಂಥೋನಿ ಹಾಗೂ ತಾಯಿ ರೋಸ್ಲಿನ್ ಕಳೆದ ಹಲವು ವರ್ಷಗಳಿಂದ ಬಾಣಸವಾಡಿಯ ಇಂದಿರಾ ಸ್ಟ್ರೀಟ್‌ನಲ್ಲಿ ಲಿವ್-ಇನ್ ರಿಲೇಷನ್‌ಶಿಪ್‌ನಲ್ಲಿ ವಾಸವಿದ್ದರು. ಮಗುವಿಗೆ ದಿಢೀರ್ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು; ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಮಗು ಮೃತಪಟ್ಟಿದೆ ಎಂದು ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಸ್ನೇಹಿತೆಯಿಂದ ದೂರು, ಗಾಯದ ಗುರುತು ಪತ್ತೆ

ದಂಪತಿಯ ಸ್ನೇಹಿತೆಯೊಬ್ಬರು ನೀಡಿದ ದೂರಿನಿಂದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. 'ಮಗುವಿನ ತಾಯಿ ರೋಸ್ಲಿನ್ ಆಗಾಗ ಮಗುವಿಗೆ ಹೊಡೆಯುತ್ತಿದ್ದರು. ಇದನ್ನು ನಾನು ನೋಡಿದ್ದೇನೆ. ಹೀಗಾಗಿ ಮಗುವಿನ ಸಾವಿನ ಬಗ್ಗೆ ಅನುಮಾನವಿದ್ದು, ಸಮಗ್ರ ತನಿಖೆ ನಡೆಸಬೇಕು' ಎಂದು ಅವರು ದೂರಿನಲ್ಲಿ ಒತ್ತಾಯಿಸಿದ್ದಾರೆ. ಇದಲ್ಲದೆ, ಪ್ರಾಥಮಿಕ ಪರಿಶೀಲನೆ ವೇಳೆ ಮಗುವಿನ ದೇಹದ ಮೇಲೆ ಕೆಲವೆಡೆ ಗಾಯದ ಗುರುತುಗಳು ಪತ್ತೆಯಾಗಿರುವುದು ಸಾವಿನ ಸುತ್ತಲಿನ ಅನುಮಾನವನ್ನು ಮತ್ತಷ್ಟು ಹೆಚ್ಚಿಸಿದೆ.

ದೂರಿನ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಾಣಸವಾಡಿ ಠಾಣಾ ಪೊಲೀಸರು, ಬಿಎನ್‌ಎಸ್‌ಎಸ್ (BNSS) ಸೆಕ್ಷನ್ 194(4) ಅಡಿಯಲ್ಲಿ 'ಅನುಮಾನಾಸ್ಪದ ಸಾವು' ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವಷ್ಟೇ ಸಾವಿಗೆ ನಿಖರ ಕಾರಣ ಸ್ಪಷ್ಟವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More
Next Story