ಎಲ್ಲಾ ಶನಿವಾರವೂ ಬ್ಯಾಂಕ್‌ಗಳಿಗೆ ರಜೆ? ಕೇಂದ್ರದಿಂದ ಮಹತ್ವದ ಆದೇಶ
x

ಬ್ಯಾಂಕ್ ನೌಕರರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರ್ಕಾರ, ಪ್ರತಿ ಶನಿವಾರವೂ ಬ್ಯಾಂಕ್‌ಗಳಿಗೆ ರಜೆ ಘೋಷಿಸಿದೆ.

ಎಲ್ಲಾ ಶನಿವಾರವೂ ಬ್ಯಾಂಕ್‌ಗಳಿಗೆ ರಜೆ? ಕೇಂದ್ರದಿಂದ ಮಹತ್ವದ ಆದೇಶ

ಭಾರತೀಯ ಬ್ಯಾಂಕ್‌ಗಳ ಸಂಘ (IBA) ಹಾಗೂ ಬ್ಯಾಂಕ್ ನೌಕರರ ಸಂಘಟನೆಗಳ ನಡುವೆ ನಡೆದ ಸಭೆಯಲ್ಲಿ ಎಲ್ಲಾ ಶನಿವಾರಗಳನ್ನು ರಜಾದಿನಗಳಾಗಿ ಘೋಷಿಸುವ ಕುರಿತು ಚರ್ಚಿಸಲಾಗಿತ್ತು.


Click the Play button to hear this message in audio format

ಬ್ಯಾಂಕ್ ನೌಕರರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ, ಪ್ರತಿ ಶನಿವಾರವೂ ಬ್ಯಾಂಕ್‌ಗಳಿಗೆ ರಜೆ ನೀಡುವ ಕುರಿತು ಆದೇಶ ಹೊರಡಿಸಿದೆ. ಈ ಹಿಂದೆ ತಿಂಗಳ ಎರಡನೇ ಮತ್ತು ನಾಲ್ಕನೇ ಶನಿವಾರ ಮಾತ್ರ ಬ್ಯಾಂಕ್‌ಗಳಿಗೆ ರಜೆ ಇತ್ತು.

ಕೇಂದ್ರ ಹಣಕಾಸು ಸಚಿವಾಲಯ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ಬ್ಯಾಂಕ್‌ಗಳಿಗೆ ಪ್ರತಿ ಶನಿವಾರ ರಜೆ ಘೋಷಿಸಲಾಗಿದೆ ಎಂದು ವರದಿಯಾಗಿದೆ. ಈ ನಿರ್ಧಾರ ಜಾರಿಗೆ ಬಂದ ಬಳಿಕ ತಿಂಗಳ ಎಲ್ಲಾ ಶನಿವಾರಗಳಂದು ಬ್ಯಾಂಕ್ ಶಾಖೆಗಳು ಕಾರ್ಯನಿರ್ವಹಿಸುವುದಿಲ್ಲ. ಇದುವರೆಗೆ ಭಾನುವಾರದ ಜೊತೆಗೆ ತಿಂಗಳ ಎರಡನೇ ಹಾಗೂ ನಾಲ್ಕನೇ ಶನಿವಾರ ಬ್ಯಾಂಕ್‌ಗಳಿಗೆ ರಜೆ ಇರುತ್ತಿತ್ತು. ಮೊದಲ, ಮೂರನೇ ಹಾಗೂ ಐದನೇ ಶನಿವಾರಗಳಲ್ಲಿ ಬ್ಯಾಂಕ್‌ಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿದ್ದವು.

ಮುಷ್ಕರದ ಬೇಡಿಕೆಗಳ ನಡುವೆ ನಿರ್ಧಾರ

ಇತ್ತೀಚೆಗೆ ಬ್ಯಾಂಕ್ ನೌಕರರ ಸಂಘಟನೆಗಳು ಮೂರು ದಿನಗಳ ಮುಷ್ಕರಕ್ಕೆ ಕರೆ ನೀಡಿದ್ದವು. ಆದರೆ ಕೊನೆಯ ಹಂತದಲ್ಲಿ ಮುಷ್ಕರವನ್ನು ಹಿಂಪಡೆಯಲಾಗಿತ್ತು. ಭಾರತೀಯ ಬ್ಯಾಂಕ್‌ಗಳ ಸಂಘಟನೆ (IBA) ಮತ್ತು ವಿವಿಧ ಬ್ಯಾಂಕ್ ನೌಕರರ ಸಂಘಟನೆಗಳ ಪ್ರತಿನಿಧಿಗಳ ನಡುವೆ ನಡೆದ ಮಾತುಕತೆಯಲ್ಲಿ ಶನಿವಾರಗಳ ರಜೆ ಸೇರಿದಂತೆ ಹಲವು ಬೇಡಿಕೆಗಳ ಕುರಿತು ಚರ್ಚೆ ನಡೆದಿತ್ತು. ಎಲ್ಲಾ ಶನಿವಾರಗಳನ್ನು ರಜಾದಿನಗಳಾಗಿ ಘೋಷಿಸುವ ವಿಚಾರ ಪರಿಶೀಲಿಸಲು ಉನ್ನತ ಮಟ್ಟದ ಸಮಿತಿ ರಚಿಸುವ ನಿರ್ಧಾರವೂ ಆಗಿತ್ತು.

ಬ್ಯಾಂಕ್ ಗ್ರಾಹಕರಿಗೆ ಬದಲಾವಣೆ

ಹೊಸ ವ್ಯವಸ್ಥೆ ಜಾರಿಗೆ ಬಂದರೆ ಬ್ಯಾಂಕ್ ಶಾಖೆಗಳಿಗೆ ತೆರಳಿ ಮಾಡುವ ವಹಿವಾಟುಗಳಿಗೆ ವಾರದ ದಿನಗಳಲ್ಲಿ ಹೆಚ್ಚಿನ ಆದ್ಯತೆ ನೀಡಬೇಕಾಗುತ್ತದೆ. ಶನಿವಾರ ಶಾಖೆಗಳು ಬಂದ್‌ ಇದ್ದರೂ, ಡಿಜಿಟಲ್ ಬ್ಯಾಂಕಿಂಗ್, ಎಟಿಎಂ ಹಾಗೂ ಇತರ ಆನ್‌ಲೈನ್ ಸೇವೆಗಳು ಲಭ್ಯವಿರುವುದು ಸೇವಾ ಸಂಸ್ಥೆಗಳ ನಿಯಮಗಳಿಗೆ ಒಳಪಟ್ಟಿರುತ್ತದೆ. ಬ್ಯಾಂಕ್ ನೌಕರರ ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿದ್ದ ವಾರದ ಐದು ದಿನಗಳ ಕೆಲಸದ ವ್ಯವಸ್ಥೆಗೆ ಸಂಬಂಧಿಸಿದಂತೆ ಈ ಬೆಳವಣಿಗೆ ಮಹತ್ವ ಪಡೆದಿದೆ.

Read More
Next Story