ಬಸವ ಮಂಟಪ ಕೃತಿ ವಿವಾದ: ಕೊಚ್ಚಿನ್‌ನಲ್ಲಿ ರವಿ ಹಂಜ್ ವಶಕ್ಕೆ
x

‘ಬಸವ ಮಂಟಪ’ ಕೃತಿ ವಿವಾದದ ಪ್ರಮುಖ ಆರೋಪಿ ಲೇಖಕ ರವಿ ಹಂಜ್ ಅವರನ್ನು ವಿದೇಶಕ್ಕೆ ತೆರಳಲು ಯತ್ನಿಸಿದ ವೇಳೆ ಕೊಚ್ಚಿನ್ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.

ಬಸವ ಮಂಟಪ ಕೃತಿ ವಿವಾದ: ಕೊಚ್ಚಿನ್‌ನಲ್ಲಿ ರವಿ ಹಂಜ್ ವಶಕ್ಕೆ

ಈ ನಡುವೆ ರವಿ ಹಂಜ್ ಭಾರತದಲ್ಲೇ ಇರುವುದಾಗಿ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಇದೀಗ ಕೊಚ್ಚಿನ್ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಅವರನ್ನು ವಶಕ್ಕೆ ಪಡೆದ ತಕ್ಷಣ ಬೆಳಗಾವಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


Click the Play button to hear this message in audio format

ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ‘ಬಸವ ಮಂಟಪ’ ಕೃತಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿರುವ ಲೇಖಕ ರವಿ ಹಂಜ್ ಅವರನ್ನು ಕೇರಳದ ಕೊಚ್ಚಿನ್ ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಶನಿವಾರ ವಿದೇಶಕ್ಕೆ ಪ್ರಯಾಣಿಸಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ವೇಳೆ ಅವರನ್ನು ತಡೆದು ವಶಕ್ಕೆ ಪಡೆಯಲಾಗಿದೆ.

‘ಬಸವ ಮಂಟಪ’ ಕೃತಿಯ ಕುರಿತಾದ ವಿವಾದದ ಹಿನ್ನೆಲೆಯಲ್ಲಿ ಲೇಖಕ ರವಿ ಹಂಜ್ ವಿರುದ್ಧ ಬೆಳಗಾವಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ವಿದೇಶಕ್ಕೆ ಪರಾರಿಯಾಗದಂತೆ ಬೆಳಗಾವಿ ಪೊಲೀಸರು ಲುಕ್ ಔಟ್ ನೋಟಿಸ್ ಹೊರಡಿಸಿದ್ದರು.

ಬೆಳಗಾವಿ ಪೊಲೀಸರಿಗೆ ಮಾಹಿತಿ

ಈ ನಡುವೆ ರವಿ ಹಂಜ್ ಭಾರತದಲ್ಲೇ ಇರುವುದಾಗಿ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಇದೀಗ ಕೊಚ್ಚಿನ್ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಅವರನ್ನು ವಶಕ್ಕೆ ಪಡೆದ ತಕ್ಷಣ ಬೆಳಗಾವಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮುಂದಿನ ಕಾನೂನು ಪ್ರಕ್ರಿಯೆಗಳನ್ನು ಬೆಳಗಾವಿ ಪೊಲೀಸರು ಕೈಗೊಳ್ಳಲಿದ್ದಾರೆ. ‘ಬಸವ ಮಂಟಪ’ ಕೃತಿ ವಿವಾದಕ್ಕೆ ಸಂಬಂಧಿಸಿದಂತೆ ರವಿ ಹಂಜ್ ಅವರನ್ನು ವಶಕ್ಕೆ ಪಡೆದಿರುವುದು ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ.

Read More
Next Story