x

ಬೆಂಗಳೂರಿನಲ್ಲಿ ಅನಾಥ ವಾಹನಗಳ ತೆರವು ಕಾರ್ಯಾಚರಣೆ | ಗಾಂಧಿನಗರದಲ್ಲಿ ರಸ್ತೆ ಬದಿ ನಿಂತ ವಾಹನಗಳಿಗೆ ಪಾಲಿಕೆ ಬಿಸಿ

ಬೆಂಗಳೂರಿನ ರಸ್ತೆಗಳಲ್ಲಿ ಬಹಳ ದಿನಗಳಿಂದ ನಿಂತಿರುವ ಅನಾಥ ಹಾಗೂ ಬಳಕೆಯಲ್ಲಿಲ್ಲದ ವಾಹನಗಳ ವಿರುದ್ಧ ಬೆಂಗಳೂರು ಸೆಂಟ್ರಲ್ ಸಿಟಿ ಕಾರ್ಪೊರೇಷನ್ ಕಾರ್ಯಾಚರಣೆ ಆರಂಭಿಸಿದೆ.


ಬೆಂಗಳೂರಿನ ರಸ್ತೆಗಳಲ್ಲಿ ಬಹಳ ದಿನಗಳಿಂದ ನಿಂತಿರುವ ಅನಾಥ ಹಾಗೂ ಬಳಕೆಯಲ್ಲಿಲ್ಲದ ವಾಹನಗಳ ವಿರುದ್ಧ ಬೆಂಗಳೂರು ಸೆಂಟ್ರಲ್ ಸಿಟಿ ಕಾರ್ಪೊರೇಷನ್ ಕಾರ್ಯಾಚರಣೆ ಆರಂಭಿಸಿದೆ. ಗಾಂಧಿನಗರ ಉಪವಿಭಾಗದಲ್ಲಿ ರಸ್ತೆ ಬದಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಅನಾಥವಾಗಿ ನಿಂತಿರುವ ವಾಹನಗಳನ್ನು ತೆರವುಗೊಳಿಸಲಾಗುತ್ತಿದೆ. ಸಂಚಾರ ದಟ್ಟಣೆ ನಿಯಂತ್ರಣ, ರಸ್ತೆ ಸುರಕ್ಷತೆ ಹೆಚ್ಚಳ ಹಾಗೂ ಸಾರ್ವಜನಿಕ ಸ್ಥಳಗಳ ಸಮರ್ಪಕ ಬಳಕೆಯ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ರಸ್ತೆಗಳನ್ನು ಆಕ್ರಮಿಸಿಕೊಂಡಿರುವ ಹಳೆಯ ವಾಹನಗಳ ತೆರವಿನಿಂದ ಪಾದಚಾರಿಗಳಿಗೆ ಮತ್ತು ವಾಹನ ಸವಾರರಿಗೆ ಅನುಕೂಲವಾಗುವ ನಿರೀಕ್ಷೆಯಿದೆ. ಬೆಂಗಳೂರಿನ ರಸ್ತೆಗಳನ್ನು ಸುಗಮಗೊಳಿಸುವ ಪಾಲಿಕೆಯ ಈ ಕಾರ್ಯಾಚರಣೆಯ ದೃಶ್ಯಗಳು ಇಲ್ಲಿವೆ.

Read More
Next Story