15 ಸಾವಿರ ರೂ. ಗೌರವಧನ ಹೆಚ್ಚಳಕ್ಕೆ ಆಶಾ ಕಾರ್ಯಕರ್ತೆಯರ ಪಟ್ಟು | ಫ್ರೀಡಂ ಪಾರ್ಕ್‌ನಲ್ಲಿ ನಾಲ್ಕನೇ ದಿನವೂ ಹೋರಾಟ
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ 15 ಸಾವಿರ ರೂ. ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಲಿಖಿತ ಭರವಸೆಗೆ ಪಟ್ಟು ಹಿಡಿದಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. 15 ಸಾವಿರ ರೂ. ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಕೊರೆಯುವ ಚಳಿಯಲ್ಲೂ ಪುಟ್ಟ ಮಕ್ಕಳೊಂದಿಗೆ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದರೂ ಜಗ್ಗದ ಕಾರ್ಯಕರ್ತೆಯರು, ಲಿಖಿತ ಭರವಸೆ ಸಿಗುವವರೆಗೂ ಹೋರಾಟ ಮುಂದುವರಿಸುವುದಾಗಿ ಪಟ್ಟು ಹಿಡಿದಿದ್ದಾರೆ. ಸರ್ಕಾರ ಯಾವಾಗ ಬೇಡಿಕೆ ಈಡೇರಿಸಲಿದೆ?
Next Story

