x

ಕೆ.ಆರ್.ಪುರ ಟಿನ್ ಫ್ಯಾಕ್ಟರಿ ಜಂಕ್ಷನ್ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ | ಮೆಟ್ರೋ, ಬಸ್ ಸಂಚಾರಕ್ಕೆ ಹೊಸ ವ್ಯವಸ್ಥೆ

ಬೆಂಗಳೂರಿನ ಟಿನ್ ಫ್ಯಾಕ್ಟರಿ ಜಂಕ್ಷನ್ ಸಂಚಾರ ದಟ್ಟಣೆ ನಿವಾರಣೆಗೆ ಮಾಸ್ಟರ್ ಪ್ಲಾನ್ ಸಿದ್ಧವಾಗುತ್ತಿದೆ. 40 ವಾರ್ಡ್‌ಗಳಲ್ಲಿ ವಾರ್ಡ್ ಒನ್ ಅಭಿಯಾನದ ಎರಡನೇ ಹಂತ ಆರಂಭವಾಗಿದೆ.


Click the Play button to hear this message in audio format

ಬೆಂಗಳೂರಿನ ಕೆ.ಆರ್.ಪುರದ ಟಿನ್ ಫ್ಯಾಕ್ಟರಿ ಜಂಕ್ಷನ್‌ನ ಸಂಚಾರ ದಟ್ಟಣೆ ಹಾಗೂ ಪಾದಚಾರಿಗಳ ಸುರಕ್ಷತೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸಮಗ್ರ ಮಾಸ್ಟರ್ ಪ್ಲಾನ್ ಸಿದ್ಧಪಡಿಸುವಂತೆ ಸೂಚಿಸಿದ್ದಾರೆ. ಪಾದಚಾರಿ ಮಾರ್ಗಗಳ ಅಭಿವೃದ್ಧಿ, ಬಸ್ ಬೇಗಳ ನಿರ್ಮಾಣ, ರಸ್ತೆ ವಿಸ್ತರಣೆ, ಜಂಕ್ಷನ್ ಮರುವಿನ್ಯಾಸ ಹಾಗೂ ಫ್ರೀ ಲೆಫ್ಟ್ ವ್ಯವಸ್ಥೆ ಜಾರಿಗೆ ಯೋಜನೆ ರೂಪಿಸಲಾಗುತ್ತಿದೆ. ಮೆಟ್ರೋ ಕಾಮಗಾರಿಯಿಂದ ಹಾನಿಗೊಳಗಾದ ರಸ್ತೆಗಳನ್ನು ತಕ್ಷಣ ದುರಸ್ತಿಗೊಳಿಸಲು ಮತ್ತು ಸಂಪರ್ಕ ರಸ್ತೆಗಳಲ್ಲಿ ಗುಂಡಿಗಳನ್ನು ಒಂದು ವಾರದೊಳಗೆ ಮುಚ್ಚಲು ಸೂಚನೆ ನೀಡಿದ್ದಾರೆ. ಇದರ ಜೊತೆಗೆ ಬೆಂಗಳೂರಿನ ಸುಮಾರು 40 ವಾರ್ಡ್‌ಗಳಲ್ಲಿ ಎರಡನೇ ಹಂತದ 'ವಾರ್ಡ್ ಒನ್ ಅಭಿಯಾನ' ಆರಂಭವಾಗಿದೆ. ಮೊದಲ ಹಂತದಲ್ಲಿ ಗುರುತಿಸಿದ್ದ ಕಾಮಗಾರಿಗಳ ಪೈಕಿ ಶೇ.90ರಷ್ಟು ಪೂರ್ಣಗೊಂಡಿವೆ ಎಂದು ತಿಳಿಸಲಾಗಿದೆ. ಬೆಂಗಳೂರಿನ ರಸ್ತೆ, ಕಸ, ಚರಂಡಿ ಹಾಗೂ ಪಾದಚಾರಿ ಮಾರ್ಗಗಳ ಸಮಸ್ಯೆಗೆ ಈ ಅಭಿಯಾನದಿಂದ ಪರಿಹಾರ ಸಿಗುತ್ತಾ?

Read More
Next Story