ಟ್ರಿನಿಟಿ ಮೆಟ್ರೋ ನಿಲ್ದಾಣದ ಸಂಪರ್ಕ ರಸ್ತೆಗೆ ದುರಸ್ತಿ ಭಾಗ್ಯವಿಲ್ಲ! ಅರೆಬರೆ ರಸ್ತೆ ಕಾಮಗಾರಿಗೆ ಸಾರ್ವಜನಿಕರ ಆಕ್ರೋಶ
ಟ್ರಿನಿಟಿ ಮುಖ್ಯರಸ್ತೆ–ಎಂಜಿ ರಸ್ತೆ ಸಂಪರ್ಕಿಸುವ ಜನರಲ್ ಕೆ.ಎಸ್. ತಿಮ್ಮಯ್ಯ ರಸ್ತೆ ದುರಸ್ತಿ. ಆದರೆ ಟ್ರಿನಿಟಿ ಮೆಟ್ರೋ ನಿಲ್ದಾಣದ ಸಂಪರ್ಕ ರಸ್ತೆ ದುಸ್ಥಿತಿಯಲ್ಲೇ ಉಳಿದಿದೆ.
ಬೆಂಗಳೂರಿನ ಜನರಲ್ ಕೆ.ಎಸ್. ತಿಮ್ಮಯ್ಯ ರಸ್ತೆಯ ಅವ್ಯವಸ್ಥೆಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಟ್ರಿನಿಟಿ ಮುಖ್ಯರಸ್ತೆಯಿಂದ ಎಂಜಿ ರಸ್ತೆಗೆ ಸಂಪರ್ಕ ಕಲ್ಪಿಸುವ ಬೈಪಾಸ್ ರಸ್ತೆಯನ್ನು ದುರಸ್ತಿ ಮಾಡಲಾಗಿದೆ. ಆದರೆ, ಟ್ರಿನಿಟಿ ಮೆಟ್ರೋ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಸ್ಥಿತಿ ಮಾತ್ರ ಇನ್ನೂ ಸುಧಾರಿಸಿಲ್ಲ. ಒಂದು ರಸ್ತೆಗೆ ದುರಸ್ತಿ ಭಾಗ್ಯ ಕಲ್ಪಿಸಿ, ಅದಕ್ಕೆ ಹೊಂದಿಕೊಂಡಿರುವ ಮೆಟ್ರೋ ನಿಲ್ದಾಣದ ಸಂಪರ್ಕ ರಸ್ತೆಯನ್ನು ಹಾಗೆಯೇ ಬಿಟ್ಟಿರುವುದಕ್ಕೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೆಟ್ರೋ ನಿಲ್ದಾಣಕ್ಕೆ ಹೋಗುವ ಪ್ರಯಾಣಿಕರು ಸುಗಮವಾಗಿ ಸಂಚರಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನ ರಸ್ತೆ ಅಭಿವೃದ್ಧಿ ಕಾಮಗಾರಿಗಳಲ್ಲಿ ಸಮಗ್ರ ಯೋಜನೆಯ ಕೊರತೆಯಿದೆಯೇ? ಅಧಿಕಾರಿಗಳ ಗಮನಕ್ಕೆ ಈ ಸಮಸ್ಯೆ ಇನ್ನೂ ಬಂದಿಲ್ಲವೇ? ಸಂಬಂಧಪಟ್ಟವರು ಕೂಡಲೇ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕಿದೆ.
Next Story

